ಜಿಲ್ಲಾ ಕೇಂದ್ರದಲ್ಲಿ 16 ಪರೀಕ್ಷಾ ಕೇಂದ್ರಗಳು, ತಾಲೂಕು ಕೇಂದ್ರದಲ್ಲಿ 15, ಹೋಬಳಿ ಮಟ್ಟದಲ್ಲಿ 14 ಹಾಗೂ ಗ್ರಾಮೀಣ ಪ್ರದೇಶದಲ್ಲಿ 28 ಕೇಂದ್ರ ಸೇರಿದಂತೆ ಒಟ್ಟು 73 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 22,041 ವಿದ್ಯಾರ್ಥಿಗಳು ಪರೀಕ್ಷೆಗೆ ಎದುರಿಸಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಅವಧಿಯೊಳಗೆ ಪ್ರಶ್ನೆ ಪತ್ರಿಕೆ ರವಾನಿಸಬೇಕು. ಈ ನಿಟ್ಟಿನಲ್ಲಿ ಪರೀಕ್ಷಾರ್ಥಿಗಳಿಗೆ ಪೂರಕ ವಾತಾವರಣ ಕೊಠಡಿ, ಕುಡಿವ ನೀರು, ಶೌಚಗೃಹ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು. ಪರೀಕ್ಷ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಜೆಸ್ಕಾಂ ಇಲಾಖೆ ಎಚ್ಚರವಹಿಸಬೇಕು. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ ಸೇವೆ ಕಲ್ಪಿಸಬೇಕಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ, ಪರೀಕ್ಷಾ ಪ್ರಕ್ರಿಯೆಯನ್ನು ಜಿಲ್ಲಾ ಪಂಚಾಯಿತಿ ಕೆಸ್ವಾನ್ ನಲ್ಲಿ ತಂಡದೊAದಿಗೆ ವೆಬ್ ಕಾಸ್ಟಿಂಗ್ ಮೂಲಕ ನಿರಂತರವಾಗಿ ಗಮನಿಸಲಾಗುವುದು ಎಂದರು.