

ಪ್ರಮುಖ ಮುಖ್ಯಾಂಶಗಳು
ಕಮಲಾಪುರ ಕೆರೆಗೆ ಮತ್ತಷ್ಟು ಪ್ರವಾಸಿಗರನ್ನು ಸೆಳೆಯಲು ಕೆರೆ ಸುತ್ತಲೂ ರಸ್ತೆ ಹಾಗೂ ಉದ್ಯಾನ ನಿರ್ಮಾಣ ಮಾಡಲು ಚಿಂತನೆ ನಡೆದಿದೆ. ಈ ಕುರಿತು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ.
ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಹಂಪಿಗೆ ಭೇಟಿ ನೀಡಿದ್ದಾಗ ಕಮಲಾಪುರ ಕೆರೆಯ ಸುತ್ತ ರಸ್ತೆ ನಿರ್ಮಾಣ ಮಾಡಿ ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕ ಚಟುವಟಿಕೆ ಕೈಗೊಳ್ಳಲು ಸೂಚಿಸಿದ್ದರು. ಆದ್ದರಿಂದ, ನಿರ್ವಿತಿ ಕೇಂದ್ರದಿಂದ ಕ್ರಿಯಾ ಯೋಜನೆ ರೂಪಿಸಲಾಗಿದೆ.