ಕಾನಹೊಸಹಳ್ಳಿ: ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಬಿ.ಎಸ್.ಯಡಿಯೂರಪ್ಪ ಸರ್ಕಾರ ಅನುದಾನ ನೀಡಿತ್ತು. ಇದುವರೆಗೆ ಕೆರೆಗಳಿಗೆ ನೀರು ತುಂಬಿಸುವ ಕೆಲಸವಾಗಿಲ್ಲ. ಈ ವಿಳಂಬಕ್ಕೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣವೆಂದು ವಿಪಕ್ಷ ನಾಯಕ ಆರ್.ಆಶೋಕ ದೂರಿದರು.
ಬರಪೀಡಿತ ಪ್ರದೇಶಗಳ ಪ್ರವಾಸದ ಬಳಿಕ ಬೆಂಗಳೂರಿಗೆ ಹಿಂದಿರುಗುವಾಗ ಗ್ರಾಮದ ಹೊರವಲಯದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿ, ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಆದರೆ, ಕಾಂಗ್ರೆಸ್ ನಾಯಕರು ಸಚಿವ ಸ್ಥಾನಕ್ಕಾಗಿ ದೆಹಲಿ ಯಾತ್ರೆ ನಡೆಸಿದ್ದಾರೆ. ಸರ್ಕಾರ ರೈತ ಪರ ಚಿಂತನೆ ಮಾಡುತ್ತಿಲ್ಲ ಎಂದು ದೂರಿದರು.