ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾದ ಭವ್ಯ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಉದ್ಘಾಟಿಸಿದರು . ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ಯೋಗ ಗುರು ಬಾಲಚಂದ್ರ ಶರ್ಮಾ, ಎಎಸ್ಪಿ ಮಂಜುನಾಥ್ ಇತರರಿದ್ದರು.
ವಿಶ್ವ ಯೋಗ ದಿನಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಇ ಬಾಲಕೃಷ್ಣ ಅಭಿಪ್ರಾಯ
ಹೊಸಪೇಟೆ: ಆಧುನಿಕ ಯುಗದಲ್ಲಿ ಮನುಷ್ಯ ಎಷ್ಟೇ ಆಸ್ತಿ-ಅಂತಸ್ತು, ಹಣ ಸಂಪಾದನೆ ಮಾಡಿದರೂ ವೃದ್ಧಾಪ್ಯದಲ್ಲಿ ಅವನ ಕೈ ಹಿಡಿಯುವುದು ಕೇವಲ ಆತ ಕಾಪಾಡಿಕೊಂಡು ಬಂದ ಉತ್ತಮ ಆರೋಗ್ಯ ಮಾತ್ರ. ಹೀಗಾಗಿ ಪ್ರತಿಯೊಬ್ಬರೂ ಯೋಗವನ್ನು ದೈನಂದಿನ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ನಗರಸಭೆ ಹಾಗೂ ವಿವಿಧ ಪ್ರಮುಖ ಸಂಘ-ಸAಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾದ ಭವ್ಯ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಈ ಬಾರಿಯ ಯೋಗ ದಿನಾಚರಣೆಯು ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಅರ್ಥಪೂರ್ಣ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ವಿಶ್ವಸಂಸ್ಥೆಯಿAದ ಯೋಗ ದಿನಾಚರಣೆ ಆರಂಭವಾಗಿ ಯಶಸ್ವಿಯಾಗಿ 12 ವರ್ಷಗಳು ಸಂದಿವೆ. ಯೋಗ ಎಂಬುದು ಕೇವಲ ಒಂದು ದಿನದ ಪ್ರದರ್ಶನವಲ್ಲ. ಇದು ನಮ್ಮ ಸನಾತನ ಋಷಿಮುನಿಗಳು ಜಗತ್ತಿಗೆ ನೀಡಿದ ಅತ್ಯಂತ ಅಮೂಲ್ಯವಾದ ಕೊಡುಗೆಯಾಗಿದೆ. ದೈಹಿಕ ಮತ್ತು ಮಾನಸಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು ಯೋಗ ಅತ್ಯಂತ ಪ್ರಮುಖ ದಾರಿಯಾಗಿದೆ ಎಂದರು.
ಮನುಷ್ಯನಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಚೆನ್ನಾಗಿದ್ದರೆ ಮಾತ್ರ ಆತನ ವೃದ್ಧಾಪ್ಯದ ದಿನಗಳು ಸುಖಕರವಾಗಿ ಕಳೆಯಲು ಸಾಧ್ಯ. ಆರೋಗ್ಯವಂತ ಸಮಾಜದ ನಿರ್ಮಾಣವಾಗಬೇಕಾದರೆ ಮೊದಲು ಆರೋಗ್ಯವಂತ ವ್ಯಕ್ತಿಗಳು ನಿರ್ಮಾಣವಾಗಬೇಕು. ಅದಕ್ಕೆ ಯೋಗ, ಪ್ರಾಣಾಯಾಮ ಶಿಕ್ಷಣವೇ ಅತ್ಯುತ್ತಮ ಮಾರ್ಗ. ಕೇವಲ ವರ್ಷಕ್ಕೊಮ್ಮೆ ಯೋಗ ದಿನ ಆಚರಿಸದೆ, ಪ್ರತಿನಿತ್ಯದ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಮೂಲಕ ಯೋಗ ದಿನಾಚರಣೆಯನ್ನು ಸಾರ್ಥಕಗೊಳಿಸೋಣ ಎಂದರು.
ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್,
ಯೋಗ ಗುರು ಬಾಲಚಂದ್ರ ಶರ್ಮಾ, ಎಎಸ್ಪಿ ಮಂಜುನಾಥ್, ಆಯುಷ್ ಇಲಾಖೆಯ ವೈದ್ಯಾಧಿಕಾರಿಳಾದ ಕೆ.ಎಚ್.ಗುರುಬಸವರಾಜ್, ಡಾ.ಮುನಿ ವಾಸುದೇವ ರೆಡ್ಡಿ, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್, ಡಿಡಿಪಿಐ ವೆಂಕಟೇಶ ರಾಮಚಂದ್ರ, ಬಿಇಓ ಉಮಾಪತಿ ಇತರರಿದ್ದರು.