ಸಾಂಸ್ಕೃತಿಕ ಕಲೆಗಳ ಉಳಿವು ಅವಶ್ಯ

ಕೊಟ್ಟೂರಿನಲ್ಲಿ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಐ.ಎಂ. ದಾರುಕೇಶ ಉದ್ಘಾಟಿಸಿದರು. ಯುವ ಮುಖಂಡ ಎಂಎಂಜೆ ಶೋಭಿತ್, ಹಿರೇಮಠದ ಯೋಗಿ ರಾಜೇಂದ್ರ ಶಿವಾಚಾರ್ಯರು, ಕಲ್ಪತರು ಕಲಾ ಟ್ರಸ್ಟ್ ಅಧ್ಯಕ್ಷ ಚಿಗಟೇರಿ ಕೊಟ್ರೇಶಿ ಇತರರಿದ್ದರು.
ಕೊಟ್ಟೂರಿನಲ್ಲಿ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಐ.ಎಂ. ದಾರುಕೇಶ ಉದ್ಘಾಟಿಸಿದರು. ಯುವ ಮುಖಂಡ ಎಂಎಂಜೆ ಶೋಭಿತ್, ಹಿರೇಮಠದ ಯೋಗಿ ರಾಜೇಂದ್ರ ಶಿವಾಚಾರ್ಯರು, ಕಲ್ಪತರು ಕಲಾ ಟ್ರಸ್ಟ್ ಅಧ್ಯಕ್ಷ ಚಿಗಟೇರಿ ಕೊಟ್ರೇಶಿ ಇತರರಿದ್ದರು.
Published on

ಕೊಟ್ಟೂರು:

ಸಂಗೀತ, ಭರತನಾಟ್ಯ ನಾಡಿನ ಸಂಸ್ಕೃತಿಯ ಪ್ರತೀಕ. ಇಂತಹ ಕಲೆಯನ್ನು ಎಲ್ಲರೂ ಆರಾಧಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಐ ಎಂ. ದಾರುಕೇಶ ಹೇಳಿದರು.

ಎಪಿಎಂಸಿ ಆವರಣದಲ್ಲಿ ಶನಿವಾರ ಸಂಜೆ ಕಲ್ಪತರು ಕಲಾ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯುವ ಮುಖಂಡ ಎಂಎಂಜೆ ಶೋಭಿತ್ ಮಾತನಾಡಿ, ಗ್ರಾಮೀಣ ಕಲಾವಿದರನ್ನು ಗುರುತಿಸಿ ಅವರಿಗೆ ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸುತ್ತಿರುವ ಕಲ್ಪತರು ಕಲಾ ಟ್ರಸ್ಟ್ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಟ್ಟೂರು ಹಿರೇಮಠದ ಯೋಗಿ ರಾಜೇಂದ್ರ ಶಿವಾಚಾರ್ಯ ಸ್ವಾಮಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನೆ ನೀಡಿದರು.
ಟ್ರಸ್ಟ್ ಕಾರ್ಯದರ್ಶಿ ಕೆ.ಆರ್. ಲತಾ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಿದ್ದರು. ಹೊಸಪೇಟೆ ಅಂಜಲಿ ಭರತನಾಟ್ಯ ಕಲಾಕೇಂದ್ರದಿಂದ ಭರತನಾಟ್ಯ ನೃತ್ಯ ಪ್ರದರ್ಶನ, ಸ್ಥಳೀಯ ಕಲಾವಿದರ ನಾಟಕ ಪ್ರದರ್ಶನ ಗಮನ ಸೆಳೆಯಿತು.
ಎಸ್ಡಿಎಂಸಿ ಅಧ್ಯಕ್ಷ ನಾರನ ಗೌಡ, ಬೀದಿ ಬದಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಕೆ.ಎಸ್. ನಾಗರಾಜ್ ಗೌಡ, ಸರ್ಕಾರಿ ನೌಕರರ ಸಂಘ ತಾಲೂಕು ಅಧ್ಯಕ್ಷ ಯೋಗೀಶ್ವರ ದಿನ್ನೆ, ಶಿಕ್ಷಕ ಕೆ.ಟಿ. ಸಿದ್ದರಾಮೇಶ್ವರ, ಪಿ.ಎಂ. ಈಶ್ವರ, ಕಲ್ಪತರು ಕಲಾ ಟ್ರಸ್ಟ್ ಅಧ್ಯಕ್ಷ ಚಿಗಟೇರಿ ಕೊಟ್ರೇಶಿ ಇದ್ದರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net