ಮತದಾರರ ಪಟ್ಟಿ ಪರಿಷ್ಕರಣೆಗೆ ಜು.05ರ ಗಡುವು

ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ಜಿ.ಜಗದೀಶ್ ಸಭೆ ನಡೆಸಿದರು. ಜಿಪಂ ಸಿಇಒ ನೋಂಗ್ಜಾಯ್ ಮಹಮದ್ ಅಲಿ ಅಕ್ರಂ ಷಾ, ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಂ.ವೈ.ಕಾಳೆ, ತಹಸೀಲ್ದಾರ್ ಶೃತಿ ಎಂ. ಮಾಳ್ಳಪ್ಪಗೌಡ್ರ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ಜಿ.ಜಗದೀಶ್ ಸೂಚನೆ
ಹೊಸಪೇಟೆ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಡಿ ಎನ್ಯಾಮುರೇಷನ್ ಫಾರ್ಮ್ (ಗಣತಿ ನಮೂನೆ) ವಿತರಣೆಯನ್ನು ಜು.05ರೊಳಗೆ ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ಜಿ.ಜಗದೀಶ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿಎಲ್ಓಗಳು ಯಾವುದೇ ಉದಾಸೀನತೆ ತೋರಬಾರದು. ಮನೆ ಮನೆ ಭೇಟಿ ವೇಳೆ ನಿಖರ ಮಾಹಿತಿಯನ್ನು ದಾಖಲಿಸಬೇಕು. ಬೇರೆಡೆ ಸ್ಥಳಾಂತರಗೊAಡ ನಾಗರಿಕರ ಬಗ್ಗೆ ವಿಶೇಷ ಗಮನ ಹರಿಸಿ, ಬೂತ್ ಮಟ್ಟದ ಏಜೆಂಟರ ಸಹಕಾರದೊಂದಿಗೆ ಎಸ್ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದು, ಕೃಷಿ ಇಲಾಖೆ ಎಚ್ಚೆತ್ತುಕೊಳ್ಳಬೇಕು. ಹವಾಮಾನ ಆಧಾರಿತ ಬಿತ್ತನೆ ಬೀಜಗಳನ್ನು ದಾಸ್ತಾನು ಇರಿಸಿಕೊಳ್ಳುವುದು ಹಾಗೂ ಪಾರದರ್ಶಕ ಬೆಳೆ ಸಮೀಕ್ಷೆ ನಡೆಸುವಂತೆ ಸೂಚಿಸಲಾಯಿತು. ರೈತರ ಹಿತದೃಷ್ಟಿಯಿಂದ ಬೆಳೆ ವಿಮೆ ನೋಂದಣಿಯಲ್ಲಿ ಶೇ. 100ರಷ್ಟು ಪ್ರಗತಿ ಸಾಧಿಸಬೇಕು. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ ಗ್ರಾಮಗಳನ್ನು ಮೊದಲೇ ಗುರುತಿಸಿ, ಅಗತ್ಯವಿದ್ದಲ್ಲಿ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಬೇಕು ಹಾಗೂ ಟ್ಯಾಂಕರ್ ಮೂಲಕ ನೀರು ಪೂರೈಸಲು ಸಿದ್ಧರಾಗಿರಬೇಕು. ಹೊಸ ಕೊಳವೆಬಾವಿಗಳನ್ನು ಕೊರೆಸುವುದನ್ನು ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರ ಕೊನೆಯ ಆಯ್ಕೆಯಾಗಿ ಪರಿಗಣಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net