ಹೊಸಪೇಟೆ ಜಿಲ್ಲಾಧಿಕಾರಿ ಮುಂದೆ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಯಿತು. ಸಂಘದ ಜಿಲ್ಲಾ ಅಧ್ಯಕ್ಷ ಟಿ.ನಾಗರಾಜ್, ತಾಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ಪ್ರಮುಖರಾದ ಎಂ.ಜಡಿಯಪ್ಪ, ಖಾಜಾ ನಿಯಾಜಿ, ಜಹಿರುದ್ದಿನ್, ಆರ್.ಆರ್.ತಾಯಪ್ಪ, ಎನ್.ಗೊವಿಂದಪ್ಪ, ಮೂರ್ತಿ ಇತರರಿದ್ದರು.
ಹೊಸಪೇಟೆ: ವಿಜಯನಗರ ಜಿಲ್ಲೆಯನ್ನು ಕೂಡಲೇ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು ಹಾಗೂ ರೈತರಿಗೆ ಎಕರೆಗೆ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ರವಾನಿಸಲಾಯಿತು.
ಮುಂಗಾರು ಮಳೆ ಕೈಕೊಟ್ಟು ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸುಮಾರು 7 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಮೆಕ್ಕೆಜೋಳ, ಜೋಳ, ಹತ್ತಿ, ಈರುಳ್ಳಿ ಬೆಳೆಗಳು ಮಳೆಯಿಲ್ಲದೆ ಒಣಗಿಹೋಗಿವೆ. ಸಾಲಬಾಧೆಯಿಂದ ಬಳಲುತ್ತಿರುವ ರೈತರ ಸಹಕಾರ, ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್‌ಗಳ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಬ್ಯಾಂಕ್ ಸಿಬ್ಬಂದಿಯಿAದ ನಡೆಯುತ್ತಿರುವ ಕಿರುಕುಳವನ್ನು ತಕ್ಷಣ ತಡೆಯಬೇಕು ಎಂದು ಒತ್ತಾಯಿಸಲಾಯಿತು.
ಇಷ್ಟೇ ಅಲ್ಲದೆ, ಕಳೆದ 10 ವರ್ಷಗಳಿಂದ ಮುಚ್ಚಲ್ಪಟ್ಟಿರುವ ಇಲ್ಲಿನ ಸಕ್ಕರೆ ಕಾರ್ಖಾನೆ ಮುಚ್ಚಿಹೊಗಿದೆ. ಕಳೆದ ಚುನಾವಣೆ ಪುರ್ವದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ಕಾರ್ಖಾನೆ ಸ್ಥಾಪಿಸುವ ಭರವಸೆ ನೀಡಿದರು. ಆದರೆ, ಅವರು ರಾಜೀನಾಮೆ ನೀಡಿದರು. ಆದರೂ, ಹೇಳಿದ ಭರವಸೆ ಈಡೇರಿಸಲಿಲ್ಲ. ಹೊಸ ಸಿಎಂ ಡಿ.ಕೆ.ಶಿವಕುಮಾರ್ ಅವರಾದರೂ ಪುನರಾರಂಭಿಸುವ ನೀಡಿದ ವಚನವನ್ನು ಸರ್ಕಾರ ಈಡೇರಿಸಬೇಕು. ಬೆಳೆ ವಿಮೆ ಹಣವನ್ನು ಶೀಘ್ರ ಬಿಡುಗಡೆ ಮಾಡುವುದು, ಕಾಕುಬಾಳು ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು (ಮುರಂ) ದಂಧೆಯನ್ನು ತಡೆಯುವುದು ಮತ್ತು ತಾಲೂಕಿನ 23 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿನ ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಸಬೇಕು. ಸರ್ಕಾರಕ್ಕೆ ಮಾರಾಟ ಮಾಡಿದ ರಾಗಿ ಮತ್ತು ಜೋಳದ ಹಣವನ್ನು ರೈತರಿಗೆ ತಕ್ಷಣ ಪಾವತಿಸಬೇಕು ಹಾಗೂ ಖರೀದಿ ಪ್ರಮಾಣದ ಮಿತಿಯನ್ನು ಹೆಚ್ಚಿಸಬೇಕು ಎಂದು ರೈತ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.