ಶಾಸಕ ಬಿ.ನಾಗೇಂದ್ರಗೆ ಸಚಿವ ಸ್ಥಾನಕ್ಕಾಗಿ ಆಗ್ರಹ

ಹೊಸಪೇಟೆ ಪುನೀತ್ ರಾಜಕುಮಾರ್ ವೃತ್ತದಲ್ಲಿ ಗುರುವಾರ ಶಾಸಕ ಬಿ.ನಾಗೇಂದ್ರ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಪಂಗಡ ಸಮುದಾಯದಿಂದ ನಗರದ  ಪ್ರತಿಭಟನೆ ನಡೆಸಲಾಯಿತು. ಪರಿಶಿಷ್ಟ ಪಂಡಗ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಲಿಂಗಣ್ಣ ನಾಯಕ ಗುಜ್ಜಲ್, ರಾಜ್ಯ ಕಾರ್ಯದರ್ಶಿ ಜಿ.ಭಾಸ್ಕರ್, ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷ ವೆಂಕಟೇಶಲು ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಪರಿಶಿಷ್ಟ ಪಂಗಡ ಸಮುದಾಯದಿಂದ ಪ್ರತಿಭಟನೆ
ಹೊಸಪೇಟೆ: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಪಂಗಡ ಸಮುದಾಯದಿಂದ ನಗರದ ಪುನೀತ್ ರಾಜಕುಮಾರ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಘೋಷಣೆಗಳನ್ನು ಕೂಗಿದರು. ಈಗಾಗಲೇ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ನಾಗೇಂದ್ರ ಅವರು, ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸಿಕೊಂಡು ಹೋಗುವ ನಾಯಕತ್ವ ಗುಣ ಹೊಂದಿದ್ದಾರೆ. ಚುನಾವಣೆಯಲ್ಲಿ ಗೆದ್ದಿರುವ ಎಲ್ಲಾ ಶಾಸಕರೂ ಸಚಿವರಾಗಲು ಅರ್ಹರಾಗಿದ್ದಾರೆ. ಆದರೆ, ಈ ಭಾಗದ ಹಿಂದುಳಿದ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯಾಗಬೇಕಾದರೆ ಬಿ.ನಾಗೇಂದ್ರ ಅವರಂತಹ ಹಿರಿಯ ನಾಯಕರ ಅವಶ್ಯಕತೆ ಇದೆ. ಕಲ್ಯಾಣ-ಕರ್ನಾಟಕ ಭಾಗದ ಪ್ರಗತಿಗಾಗಿ ಹೈಕಮಾಂಡ್ ಅವರಿಗೆ ಸಚಿವ ಸ್ಥಾನ ನೀಡಲೇಬೇಕು. ಸ್ಥಳೀಯ ಅಭಿವೃದ್ಧಿ ಮತ್ತು ಸಮುದಾಯದ ಹಿತದೃಷ್ಟಿಯಿಂದ ಅವರಿಗೆ ಸೂಕ್ತ ಸ್ಥಾನಮಾನ ಸಿಗಲೇಬೇಕು ಎಂದು ಪಟ್ಟು ಹಿಡಿದಿರುವ ಅಭಿಮಾನಿಗಳು, ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ಈ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟ ಪಂಡಗ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಲಿಂಗಣ್ಣ ನಾಯಕ ಗುಜ್ಜಲ್, ರಾಜ್ಯ ಕಾರ್ಯದರ್ಶಿ ಜಿ.ಭಾಸ್ಕರ್, ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷ ವೆಂಕಟೇಶಲು, ಪ್ರಮುಖರಾದ ತಿಪ್ಪೇಸ್ವಾಮಿ ಮುದ್ದೆ, ಸೈಯ್ಯದ್ ಶುಕೂರ್, ಮಂಜುನಾಥ, ಹನುಮೇಶ್ ಯಾದವ್, ರ‍್ರಿಸ್ವಾಮಿ, ಜಂಗಲಪ್ಪ ಸಣ್ಣಕ್ಕಿ, ಕಿಚಿಡಿ ಭರತ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net