ಸಣ್ಣ ನೀರಾವರಿ ಗಣತಿ ನಿರ್ಲಕ್ಷ್ಯ ವಹಿಸಿದರೆ ಶಿಸ್ತು ಕ್ರಮ

ಕವಿತಾ ಎಸ್.ಮನ್ನಿಕೇರಿ
ಕವಿತಾ ಎಸ್.ಮನ್ನಿಕೇರಿ
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಎಚ್ಚರಿಕೆ
ಹೊಸಪೇಟೆ: ಜಿಲ್ಲೆಯಲ್ಲಿ ಪ್ರಗತಿ ಕುಂಠಿತಗೊAಡಿರುವ 7ನೇ ಸಣ್ಣ ನೀರಾವರಿ ಹಾಗೂ 2ನೇ ನೀರಿನಾಸರೆ ಗಣತಿಯನ್ನು ಸರ್ಕಾರದ ನಿರ್ದೇಶನದಂತೆ ಜೂ.15ರ ಒಳಗಾಗಿ ಪೂರ್ಣ ಪ್ರಮಾಣದಲ್ಲಿ ಮುಕ್ತಾಯಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ನಿರ್ದೇಶಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಂಕಿ ಸಂಖ್ಯೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಜಂಟಿ ಸಭೆಯ ಮಾತನಾಡಿದರು.
ಸಣ್ಣ ನೀರಾವರಿ ಇಲಾಖೆಯ ಎಇಇ ತಹಸೀಲ್ದಾರರೊಂದಿಗೆ ಸಮನ್ವಯ ಸಾಧಿಸಿ, ನಿಗದಿತ ಅವಧಿಯೊಳಗೆ ಗಣತಿ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಪ್ರಕೃತಿ ವಿಕೋಪ, ಬರಗಾಲ ಅಥವಾ ಕೀಟಬಾಧೆಯಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ಸೌಲಭ್ಯ ಮತ್ತು ಪರಿಹಾರ ಸಿಗಬೇಕಾದರೆ ಬೆಳೆ ಕಟಾವು ಪ್ರಯೋಗ ಅಂಕಿ-ಅAಶಗಳು ನಿಖರವಾಗಿರಬೇಕು. ತಪ್ಪು ಲೆಕ್ಕಾಚಾರಗಳಿಂದಾಗಿ ಯಾವೊಬ್ಬ ರೈತನಿಗೂ ಅನ್ಯಾಯವಾಗಬಾರದು ಎಂದು ಎಚ್ಚರಿಸಿದರು.
ಜಿಲ್ಲೆಯಾದ್ಯಂತ ಬೆಳೆ ಕಟಾವು ಪ್ರಯೋಗಗಳನ್ನು ನಿಯಮಾನುಸಾರ ಅತ್ಯಂತ ಪಾರದರ್ಶಕವಾಗಿ ಕೈಗೊಳ್ಳಬೇಕು. ಅಧಿಕಾರಿಗಳೊಂದಿಗೆ ಜಂಟಿಯಾಗಿ ಜಮೀನುಗಳಿಗೆ ಖುದ್ದಾಗಿ ಭೇಟಿ ನೀಡಬೇಕು. ಬೆಳೆ ಕಟಾವಿನ ಪ್ರಕ್ರಿಯೆಗಾಗಿ ನಿಗದಿಪಡಿಸಲಾಗಿರುವ ತಾಂತ್ರಿಕ ಆಪ್‌ನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಬೆಳೆ ಕಟಾವು ನಡೆಯುವ ಸಮಯದಲ್ಲಿ ಸಂಬAಧಪಟ್ಟ ವಿಮಾ ಕಂಪನಿಯ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳದಲ್ಲಿ ಹಾಜರಿರಬೇಕು. ಇದರೊಂದಿಗೆ, ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ನಮೂನೆ 1 ಮತ್ತು 2ರ ದಾಖಲೀಕರಣ ಕೂಡಲೇ ಪೂರ್ಣಗೊಳಿಸಬೇಕು. ರೈತರ ಬೆಳೆ ವಿಮೆ ಪ್ರಕ್ರಿಯೆಗೆ ಪೂರಕವಾಗಿರುವುದರಿಂದ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿತನ ತೋರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಎನ್.ಕೆ.ಪತ್ರಿಬಸಪ್ಪ, ರೇಷ್ಮೆ ಇಲಾಖೆ ಉಪನಿರ್ದೇಶಕ ಶ್ರೀಹರ್ಷ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಪ್ರಭುರಾಜ, ಜಿ.ಪಂ.ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net