ಹರಪನಹಳ್ಳಿ: ರಕ್ತದಾನ ಜೀವ ಉಳಿಸುವ ಅಮೂಲ್ಯ ಪ್ರಕ್ರಿಯೆಯಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ತಿಳಿಸಿದರು.
ತಾಲೂಕಿನ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಸಹಕಾರ ಸಮೃದ್ಧಿ ಧ್ಯೇಯದೊಂದಿಗೆ ಆಯೋಜಿಸಿದ್ದ ಬೈಕ್ ಜಾಥಾ ಮತ್ತು ಆರೋಗ್ಯ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ರಕ್ತದಾನ ಮತ್ತೊಬ್ಬರ ಜೀವ ಉಳಿಸುವುದಲ್ಲದೆ ದಾನಿಗಳಿಗೂ ಹಲವಾರು ದೈಹಿಕ ಮತ್ತು ಮಾನಸಿಕ ಪ್ರಯೋಜನಗಳಿವೆ. 18 ರಿಂದ 45 ವರ್ಷದೊಳಗಿನ ಕನಿಷ್ಠ 45 ಕೆಜಿ ತೂಕ ಹೊಂದಿರುವ ಮತ್ತು ಯಾವುದೇ ಗಂಭೀರ ಕಾಯಿಲೆ ಇಲ್ಲದಿರುವ ಎಲ್ಲರೂ ರಕ್ತದಾನ ಮಾಡಬಹುದು ಎಂದು ತಿಳಿಸಿದರು.