ಬಿಜೆಪಿ ಪಾದಯಾತ್ರೆಗೆ ಡೋಂಟ್ ಕೇರ್

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ತಹಶಿಲ್ದಾರ್ ಶೃತಿ ಎಂ.ಮಳ್ಳಪ್ಪಗೌಡ್ರ್, ನಗರಸಭೆ ಅಧ್ಯಕ್ಷ ಎನ್.ರೂಪೇಶ್, ಪೌರಾಯುಕ್ತ ಎರಗುಡಿ ಶಿವಕುಮಾರ್, ಸದಸ್ಯೆ ಮುನ್ನಿ ಖಾಸಿಂ, ಎಇಇ ಮನ್ಸೂರು ಅಹಮದ್, ನಗರಸಭೆ ವ್ಯವಸ್ಥಾಪಕ ಕೃಷ್ಣಮೂರ್ತಿ, ಕಂದಾಯ ಅಧಿಕಾರಿ ನಾಗರಾಜು ಇತರರಿದ್ದರು.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ತಹಶಿಲ್ದಾರ್ ಶೃತಿ ಎಂ.ಮಳ್ಳಪ್ಪಗೌಡ್ರ್, ನಗರಸಭೆ ಅಧ್ಯಕ್ಷ ಎನ್.ರೂಪೇಶ್, ಪೌರಾಯುಕ್ತ ಎರಗುಡಿ ಶಿವಕುಮಾರ್, ಸದಸ್ಯೆ ಮುನ್ನಿ ಖಾಸಿಂ, ಎಇಇ ಮನ್ಸೂರು ಅಹಮದ್, ನಗರಸಭೆ ವ್ಯವಸ್ಥಾಪಕ ಕೃಷ್ಣಮೂರ್ತಿ, ಕಂದಾಯ ಅಧಿಕಾರಿ ನಾಗರಾಜು ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಂಸದ ಈ.ತುಕಾರಾಂ ಹೇಳಿಕೆ/ ಇಂದಿರಾ ಕ್ಯಾಂಟೀನ್ ಗೆ ಚಾಲನೆ
ಹೊಸಪೇಟೆ: ಇಂದಿರಾ ಕ್ಯಾಂಟೀನ್ ನಿಂದ ಬಡವರ ಹೊಟ್ಟೆ ತುಂಬಿಸುವುದು ನಮ್ಮ ಆದ್ಯತೆ ಎಂದು ಸಂಸದ ಈ.ತುಕಾರಾಂ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದ ಸಮೀಪ ಇಂದಿರಾ ಕ್ಯಾಂಟೀನ್‌ಗೆ ಗುರುವಾರ ವಿಶೇಷ ಪೂಜೆ ಸಲ್ಲಿಸಿ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿದರು.
ಇಂದಿರಾ ಕ್ಯಾಂಟೀನ್ ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಹಾಗೂ ಜನಪರ ಯೋಜನೆ. ಇದರಿಂದ ಬಡವರು ಮತ್ತು ಶ್ರಮಿಕ ವರ್ಗಕ್ಕೆ ಕಡಿಮೆ ದರದಲ್ಲಿ ಗುಣಮಟ್ಟದ ಊಟ-ಉಪಾಹಾರ ಲಭ್ಯವಾಗುತ್ತಿದ್ದು, ರಾಜ್ಯಾದ್ಯಂತ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸೆ.05 ರಂದು ಕೂಡ್ಲಿಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಳ್ಳಲಿರುವ ಮಹತ್ವದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಅಖಂಡ ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದರು.
ವಿರೋಧ ಪಕ್ಷ ಬಿಜೆಪಿಯ ಪಾದಯಾತ್ರೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ತುಕಾರಾಂ, ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿಯುವ ಮೊದಲು ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸಲಿ. ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಈ ಜ್ವಲಂತ ಸಮಸ್ಯೆಗಳ ವಿರುದ್ಧ ಬಿಜೆಪಿ ಹೋರಾಟ ನಡೆಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯ ಯಾವುದೇ ಪಾದಯಾತ್ರೆಯಿಂದ ರಾಜ್ಯ ಸರ್ಕಾರಕ್ಕೆ ಕಿಂಚಿತ್ತೂ ಅಲುಗಾಡಿಸಲು ಸಾಧ್ಯವಿಲ್ಲ ಎಂದ ಅವರು, 2028ರ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net