ಕಕ ರಾಜ್ಯೋತ್ಸವ ಪ್ರಶಸ್ತಿಗೆ ಡಾ.ಗೋವಿಂದ ಭಾಜನ

ಗುಲ್ಬರ್ಗಾ ವಿವಿಯಲ್ಲಿ ಬುಧವಾರ ಕನ್ನಡ ವಿವಿಯ ಪ್ರಾಧ್ಯಾಪಕ ಡಾ.ಗೋವಿಂದ ಅವರಿಗೆ ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಲೇಖಕಿ ದೀಪಾ ಬಸ್ತಿ, ಗುಲ್ಬರ್ಗಾ ವಿವಿಯ ಕುಲಪತಿ ಪ್ರೊ.ಶಶಿಕಾಂತ ಎಸ್.ಉಡಿಕೇರಿ ಇತರರಿದ್ದರು.
ಗುಲ್ಬರ್ಗಾ ವಿವಿಯಲ್ಲಿ ಬುಧವಾರ ಕನ್ನಡ ವಿವಿಯ ಪ್ರಾಧ್ಯಾಪಕ ಡಾ.ಗೋವಿಂದ ಅವರಿಗೆ ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಲೇಖಕಿ ದೀಪಾ ಬಸ್ತಿ, ಗುಲ್ಬರ್ಗಾ ವಿವಿಯ ಕುಲಪತಿ ಪ್ರೊ.ಶಶಿಕಾಂತ ಎಸ್.ಉಡಿಕೇರಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗುಲ್ಬರ್ಗಾ ವಿವಿಯಿಂದ ಪ್ರಶಸ್ತಿ

ಹೊಸಪೇಟೆ : ಕನ್ನಡ ವಿವಿಯ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗೋವಿಂದ ಅವರು ಗುಲ್ಬರ್ಗಾ ವಿವಿ ನೀಡುವ ಸಾಲಿನ ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಲಬುರಗಿ ಗುಲ್ಬರ್ಗಾ ವಿವಿಯ ಸಭಾಂಗಣದಲ್ಲಿ ಬುಧವಾರ ಬೂಕರ್ ಪ್ರಶಸ್ತಿ ವಿಜೇತರಾದ ಲೇಖಕಿ ದೀಪಾ ಬಸ್ತಿ ಅವರು ಡಾ.ಗೋವಿಂದ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿ, ಸನ್ಮಾನಿಸಿದರು. ಗುಲ್ಬರ್ಗಾ ವಿವಿಯ ಕುಲಪತಿ ಪ್ರೊ.ಶಶಿಕಾಂತ ಎಸ್.ಉಡಿಕೇರಿ, ಮೌಲ್ಯಮಾಪನ ಕುಲಸಚಿವ ಡಾ.ಎನ್.ಜಿ.ಕಣ್ಣೂರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net