ಶಿಕ್ಷಣ ಪದವಿ ಅಲ್ಲ; ಅರಿವಿನ ಶಕ್ತಿ

ಕನ್ನಡ ವಿವಿಯ ಪಂಪ ಸಭಾಂಗಣದಲ್ಲಿ ಸೋಮವಾರ ನಡೆದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿವಿಯ ಸಹಪ್ರಾಧ್ಯಾಪಕಿ ಡಾ.ಜ್ಯೋತಿ ಮಾತನಾಡಿದರು. ಕುಲಸಚಿವ ಡಾ.ವಿರೂಪಾಕ್ಷಿ ಪೂಜಾರಹಳ್ಳಿ, ಮಹಿಳಾ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಡಾ.ಶೈಲಜ ಇಂ.ಹಿರೇಮಠ ಇತರರಿದ್ದರು.
ಕನ್ನಡ ವಿವಿಯ ಪಂಪ ಸಭಾಂಗಣದಲ್ಲಿ ಸೋಮವಾರ ನಡೆದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿವಿಯ ಸಹಪ್ರಾಧ್ಯಾಪಕಿ ಡಾ.ಜ್ಯೋತಿ ಮಾತನಾಡಿದರು. ಕುಲಸಚಿವ ಡಾ.ವಿರೂಪಾಕ್ಷಿ ಪೂಜಾರಹಳ್ಳಿ, ಮಹಿಳಾ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಡಾ.ಶೈಲಜ ಇಂ.ಹಿರೇಮಠ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತುಮಕೂರು ವಿವಿಯ ಸಹಪ್ರಾಧ್ಯಾಪಕಿ ಡಾ.ಜ್ಯೋತಿ ಅಭಿಪ್ರಾಯ
ಹೊಸಪೇಟೆ: ಮದುವೆ ಎನ್ನುವುದು ಸಾಂಗತ್ಯಕ್ಕೆ ಹೊರತು ಆರ್ಥಿಕ ಅಗತ್ಯಕ್ಕೆ ಅಲ್ಲ. ಇದು ಮಹಿಳೆಯರು ಅರ್ಥ ಮಾಡಿಕೊಳ್ಳಬೇಕಾದ ವಾಸ್ತವತೆ ಎಂದು ತುಮಕೂರು ವಿವಿಯ ಸಹಪ್ರಾಧ್ಯಾಪಕಿ ಡಾ.ಜ್ಯೋತಿ ಹೇಳಿದರು.
ಕನ್ನಡ ವಿವಿಯ ಪಂಪ ಸಭಾಂಗಣದಲ್ಲಿ ಮಹಿಳಾ ಅಧ್ಯಯನ ವಿಭಾಗದಿಂದ ಸೋಮವಾರ ಆಯೋಜಿಸಿದ್ದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಹಿಳಾ ಶಿಕ್ಷಣ, ಉದ್ಯೋಗ ಮತ್ತು ಆತ್ಮ ಗೌರವ ಎಂಬ ಉಪನ್ಯಾಸದಲ್ಲಿ ಮಾತನಾಡಿದರು.
ಶಿಕ್ಷಣ ಎನ್ನುವುದು ಪುರುಷ ಮಹಿಳೆ ಇಬ್ಬರಿಗೂ ಅವಶ್ಯಕ. ಶಿಕ್ಷಣ ಕೇವಲ ಪದವಿ ಪಡೆಯುವುದಲ್ಲ ಅನ್ಯಾಯವನ್ನು ಪ್ರಶ್ನಿಸುವುದು. ತನ್ನನ್ನು ತಾನು ಅರಿತುಕೊಳ್ಳುವಲ್ಲಿ ಸಾಮಾಜಿಕ ಚೌಕಟ್ಟನ್ನು ಮೀರಿ ಯೋಚಿಸುವುದರಲ್ಲಿ ಶಿಕ್ಷಣ ಅವಶ್ಯಕ ಬದುಕು ಕಟ್ಟಿಕೊಳ್ಳುವ ಸಾಮರ್ಥ್ಯ ಪಡೆದುಕೊಳ್ಳುವುದು ಶಿಕ್ಷಣದಿಂದ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಸಂಪ್ರದಾಯ ಆಚರಣೆ ಪದ್ಧತಿಗಳ ಮೂಲಕ ತಮ್ಮ ಜೀವನ ಕಟ್ಟಿಕೊಳ್ಳುವುದನ್ನು ಮರೆಯುತ್ತಿದ್ದಾರೆ. ವಿದ್ಯಾಭ್ಯಾಸದಲ್ಲಿ ಮಹಿಳೆಯರದ್ದೇ ಮೇಲುಗೈ ಇದ್ದರೂ, ಉದ್ಯೋಗ ಕ್ಷೇತ್ರದಲ್ಲಿ ಪುರುಷರೇ ಸದೃಢರಾಗಿದ್ದಾರೆ. ಮಹಿಳೆಯರಿಗೆ ಸಾಕಷ್ಟು ಸವಲತ್ತುಗಳಿದ್ದು ಹಾಗೂ ಕಾನೂನಿನ ರಕ್ಷಣೆ ಇದ್ದು, ಎಲ್ಲವನ್ನು ಸರಿಯಾದ ಕ್ರಮದಲ್ಲಿ ಮಹಿಳೆಯರು ಬಳಸಿಕೊಳ್ಳಬೇಕು ಎಂದರು.
ಕುಲಸಚಿವ ಡಾ.ವಿರೂಪಾಕ್ಷಿ ಪೂಜಾರಹಳ್ಳಿ ಮಾತನಾಡಿ, ಪ್ರಪಂಚದ ಮಹಿಳೆಯರು ಎಲ್ಲೆಡೆ ಒಂದೇ ರೀತಿಯ ಸ್ಥಿತಿಯಲ್ಲಿ ಇಲ್ಲ. ಪ್ರಾಚೀನ ಕಾಲದಿಂದಲೂ ಮಹಿಳೆಯರ ಮೇಲಿನ ಶೋಷಣೆ ಇನ್ನೂ ಸಂಪೂರ್ಣವಾಗಿ ನಿಂತಿಲ್ಲ. ಸಮಾಜದಲ್ಲಿ ಮಹಿಳೆಯರಿಗೆ ಸಮಾನ ಹಕ್ಕು ಮತ್ತು ಗೌರವ ದೊರಕಲು ಎಲ್ಲರೂ ಸೇರಿ ಜಾಗೃತಿ ಮೂಡಿಸಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net