ಸಾಮಾಜಿಕ ಬದಲಾವಣೆಗೆ ಪ್ರಯತ್ನ

ಕೊಟ್ಟೂರು ತಾಲೂಕು ಕಚೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಯೋಗಿರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.
ಕೊಟ್ಟೂರು ತಾಲೂಕು ಕಚೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಯೋಗಿರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.
Published on
ಕೊಟ್ಟೂರು: ಹೆಣ್ಣು-ಗಂಡು ಎಂಬ ಭೇದ ಮಾಡದೆ ಎರಡರಲ್ಲೂ ಇರುವ ಆತ್ಮ ಒಂದೇ ಎನ್ನುವ ಮೂಲಕ ದೇವರ ದಾಸಿಮಯ್ಯ ಅವರು ಲಿಂಗ ಸಮಾನತೆಯನ್ನು ಸಾರಿದರು ಎಂದು ಯೋಗಿರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲೂಕು ಕಚೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇವರ ದಾಸಿಮಯ್ಯ ಅವರು ವಚನ ಸಾಹಿತ್ಯಕ್ಕೆ ಪ್ರಥಮ ಜ್ಯೋತಿ ಹಚ್ಚಿದ ಶರಣರಾಗಿದ್ದಾರೆ. ವಚನಗಳ ಮೂಲಕ ಸಾಮಾಜಿಕ ಬದಲಾವಣೆಗೆ ಪ್ರಯತ್ನಿಸಿದರು ಎಂದು ಹೇಳಿದರು.
ಗ್ರೇಡ್-2 ತಹಸೀಲ್ದಾರ್ ಎಂ.ಪ್ರತಿಭಾ ಮಾತನಾಡಿ, ದೇವರ ದಾಸಿಮಯ್ಯ ಅವರು ವಚನಗಳ ಮೂಲಕ ನೀಡಿದ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಬದುಕು ನಮ್ಮದಾಗುತ್ತದೆ ಎಂದರು.
ಪ್ರಮುಖರಾದ ರಾಂಪುರ ಬಸವರಾಜ, ಹಳ್ಳಿ ಕೊಟ್ರೇಶ್, ಬಾಚಿನಳ್ಳಿ ಗುರುಬಸವರಾಜ, ಗಂಜಿ ಪ್ರಶಾಂತ, ಬಂಟನಹಳ್ಳಿ ಗುರುಬಸಪ್ಪ, ಮತ್ತಿಹಳ್ಳಿ ಮಂಜಣ್ಣ, ಹರಪನಹಳ್ಳಿ ಅಜ್ಜಪ್ಪ, ಮಾಮನಿ ಕೊಟ್ರೇಶಿ, ಉಪತಹಸೀಲ್ದಾರ್ ಅನ್ನದಾನೇಶ ಬಿ.ಪತ್ತಾರ್, ಕಂದಾಯ ನಿರೀಕ್ಷಕ ಡಿ.ಶಿವಕುಮಾರ್, ಗ್ರಾಮ ಲೆಕ್ಕಿಗ ಹರೀಶ್, ಸಿ.ಮ.ಗುರುಬಸವರಾಜ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net