ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ

ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಹಸ್ರ ಬಿಲ್ವಾರ್ಚನೆ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ರಾಮಘಟ್ಟದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು.
ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಹಸ್ರ ಬಿಲ್ವಾರ್ಚನೆ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ರಾಮಘಟ್ಟದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು.
Published on
ಹರಪನಹಳ್ಳಿ: ಸರ್ಕಾರ ಮಾಡದ ಕೆಲಸವನ್ನು ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಮಾಡುತ್ತಿದ್ದಾರೆ ಎಂದು ರಾಮಘಟ್ಟದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಉಚ್ಚಂಗಿದುರ್ಗ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಸಹಸ್ರ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭೆಯ ಸಾನ್ನಿಧ್ಯ ವಹಿಸಿ ಸೋಮವಾರ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರತಿಯೊಂದು ಊರಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗುತ್ತಿವೆ ಎಂದು ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರುದ್ಯೋಗಿಗಳಿಗೆ ಸಾಲದ ರೂಪದಲ್ಲಿ ಹಣ ನೀಡಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಸಂಘ-ಸಂಸ್ಥೆಗಳಿಂದ ಮದ್ಯವಸನ ಬಿಡಿಸಲು ಸಾಧ್ಯವಿಲ್ಲ. ಸರ್ಕಾರವೇ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಎಂದು ಹೇಳಿದರು.
ಯೋಜನಾಧಿಕಾರಿ ಬಾಬು, ಸರಿತಾ ಎಂ ಮಂಜುನಾಥ್, ಮೇಲ್ವಿಚಾರಕಿ ಮಮತಾ, ಬಸವರಾಜ್, ಸೇವಾ ಪ್ರತಿನಿಧಿ, ಒಕ್ಕೂಟದ ಸದಸ್ಯೆಯರು , ಮಹಿಳೆಯರು, ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net