ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಯು.ಉಮಾದೇವಿ ಮಾತನಾಡಿ, ಸರ್ಕಾರವು ಅತ್ಯಂತ ಅಪ್ರಜಾತಾಂತ್ರಿಕವಾಗಿ ರಾಜ್ಯದ ವಿದ್ಯಾರ್ಥಿಗಳಿಂದ ಕನ್ನಡ ಭಾಷೆಯನ್ನೇ ಕಿತ್ತುಕೊಳ್ಳುತ್ತಿದೆ. ಇಂಗ್ಲಿಷ್ ಕಲಿಕೆ ಅವಶ್ಯಕ ನಿಜ. ಆದರೆ ಕನ್ನಡವನ್ನು ಕೊಂದು ಇಂಗ್ಲಿಷ್ ಕಲಿಸಲು ಹೊರಟಿರುವುದು ನಾಡಿನ ಜನತೆಗೆ ಮಾಡಿರುವ ದ್ರೋಹ ಹಾಗೂ ಕನ್ನಡಕ್ಕೆ ಮಾಡಿರುವ ಅಪಚಾರವಾಗಿದೆ. ನಾಡಿನ ವಿದ್ಯಾರ್ಥಿಗಳು, ಯುವಜನರು, ಪೋಷಕರು, ಸಾಹಿತಿಗಳು ಹಾಗೂ ಶಿಕ್ಷಣ ಪ್ರೇಮಿ ಜನತೆ ಕನ್ನಡವನ್ನು ರಕ್ಷಿಸಲು ನಾಗರಿಕ ಜನರು ಧ್ವನಿಯತ್ತಬೇಕು ಎಂದು ಒತ್ತಾಯಿಸಿದರು.