ಸುರಕ್ಷಿತವಾಗಿಟ್ಟುಕೊಳಬೇಕು. ಬಳಿಕ ಏ.16 ರಿಂದ ಮೇ 15 ರವರೆಗೆ ನಿಗದಿಪಡಿಸಲಾದ ಕ್ಷೇತ್ರ ಮಾಹಿತಿಗಳ ಸಂಗ್ರಹಣೆಗಾಗಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ಕೈಗೊಳ್ಳಲಿದ್ದಾರೆ. ಮೊದಲ ಹಂತದ ನಂತರ ಜನಸಂಖ್ಯಾ ಗಣತಿಯ ಪ್ರಕ್ರಿಯೆ ಆರಂಭವಾಗಲಿದೆ. ಜನಗಣತಿಯಿಂದ ದೊರೆಯುವ ದತ್ತಾಂಶವು ಸರ್ಕಾರದ ಜನಕಲ್ಯಾಣ ಯೋಜನೆಗಳ ರೂಪಿಸುವಿಕೆಗೆ ಪೂರಕವಾಗಿರುತ್ತದೆ. ಆದ್ದರಿಂದ, ಎಲ್ಲಾ ನಾಗರಿಕರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.