ತಜ್ಞ ಕನ್ನಯ್ಯ ನಾಯ್ಡು ಡ್ಯಾಂಗೆ ಭೇಟಿ

ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್‌ಗೇಟ್‌ಗಳ ಅಳವಡಿಕೆ ಕಾರ್ಯವನ್ನು ಪರಿಣತ ತಜ್ಞ ಕನ್ನಯ್ಯ ನಾಯ್ಡು ಪರಿಶೀಲಿಸಿದರು. ಟಿಬಿಬಿ ಕಾರ್ಯದರ್ಶಿ ಓಆರ್‌ಕೆ ರೆಡ್ಡಿ, ಅಧೀಕ್ಷಕ ಎಂಜನಿಯರ್‌ ನಾರಾಯಣ ನಾಯ್ಕ ಇತರರಿದ್ದರು.
ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್‌ಗೇಟ್‌ಗಳ ಅಳವಡಿಕೆ ಕಾರ್ಯವನ್ನು ಪರಿಣತ ತಜ್ಞ ಕನ್ನಯ್ಯ ನಾಯ್ಡು ಪರಿಶೀಲಿಸಿದರು. ಟಿಬಿಬಿ ಕಾರ್ಯದರ್ಶಿ ಓಆರ್‌ಕೆ ರೆಡ್ಡಿ, ಅಧೀಕ್ಷಕ ಎಂಜನಿಯರ್‌ ನಾರಾಯಣ ನಾಯ್ಕ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್‌ಗೇಟ್‌ಗಳ ಅಳವಡಿಕೆ
ಹೊಸಪೇಟೆ: ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್‌ಗೇಟ್‌ಗಳ ಅಳವಡಿಕೆ ಕಾರ್ಯವನ್ನು ಪರಿಣತ ತಜ್ಞ ಕನ್ನಯ್ಯ ನಾಯ್ಡು ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಈಗಾಗಲೇ ಜಲಾಶಯದ 18ನೇ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, ಇನ್ನುಳಿದ ಗೇಟ್‌ಗಳ ಅಳವಡಿಕೆ ಮತ್ತು ಹಳೇ ಗೇಟ್‌ಗಳ ತೆರವು ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈ ಕಾರ್ಯವನ್ನು ಪರಿಶೀಲಿಸಿದ ನಾಯ್ಡು ಕೆಲ ಸಲಹೆ, ಸೂಚನೆಗಳನ್ನು ನೀಡಿದರು.
2024ರ ಆ.10ರಂದು ಜಲಾಶಯದ 19ನೇ ಕ್ರಸ್ಟ್‌ ಗೇಟ್‌ ಕಳಚಿ ಬಿದ್ದಿದ್ದು. ಈ ಗೇಟ್‌ಗೆ ಸ್ಟಾಪ್ ಲಾಗ್‌ ಅಳವಡಿಕೆ ಮಾಡುವ ಕಾರ್ಯವನ್ನು ಕನ್ನಯ್ಯ ನಾಯ್ಡು ಅವರು ಯಶಸ್ವಿಗೊಳಿಸಿದ್ದರು. ಬಳಿಕ ಜಲಾಶಯಕ್ಕೆ ಆಗಮಿಸಿ ಜಲಾಶಯದ ಎಲ್ಲಾ ಗೇಟ್‌ಗಳು ಶಿಥಿಲಗೊಂಡಿದ್ದು, ಹೊಸ ಗೇಟ್‌ಗಳನ್ನು ಅಳವಡಿಕೆ ಮಾಡಬೇಕು ಎಂದು ವರದಿ ನೀಡಿದ್ದರು. ಪರಿಣತ ಕನ್ನಯ್ಯ ನಾಯ್ಡು ಅವರಿಗೆ ತುಂಗಭದ್ರಾ ಮಂಡಳಿ ಕಾರ್ಯದರ್ಶಿ ಓಆರ್‌ಕೆ ರೆಡ್ಡಿ ಮತ್ತು ಅಧೀಕ್ಷಕ ಎಂಜನಿಯರ್‌ ನಾರಾಯಣ ನಾಯ್ಕ ಮಾಹಿತಿ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net