ಹೊಸಪೇಟೆಯಲ್ಲಿ ಶಾಸಕ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಯಿತು. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಎಸ್.ಎ.ಗಾಳೆಪ್ಪ, ಭೀಮರಾಜ್, ಬಸವರಾಜ್, ಲಕ್ಷ್ಮಣ, ಹನುಮಕ್ಕ, ಪಾರ್ವತಮ್ಮ, ಸುಶೀಲಾ, ನಾರಾಯಣಮ್ಮ ಇತರರಿದ್ದರು.
ರೈತ ಸಂಘ ಹಾಗೂ ಹಸಿರು ಸೇನೆ(ವಾಸುದೇವ ಮೇಟಿ ಬಣ) ನೇತೃತ್ವದಲ್ಲಿ ರಸ್ತ ತಡೆ
ಹೊಸಪೇಟೆ: ಚಾಮರಾಜಪೇಟೆ ಶಾಸಕ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ವಾಸುದೇವ ಮೇಟಿ ಬಣ) ನೇತೃತ್ವದಲ್ಲಿ ರೈತರು ಡಾ.ಪುನೀತ್ ರಾಜ ಕುಮಾರ್ ವೃತ್ತದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಸೋಮವಾರ ಪ್ರತಿಭಟನೆ ನಡೆಸಿದರು.
ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಜಿಲ್ಲೆಯ ಅಭಿವೃದ್ಧಿ ಮತ್ತು ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಮತ್ತು ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಎಲ್ಲಾ ಜಾತಿ, ಧರ್ಮದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಂಡು ಬರುವ ತಾಕತ್ತು ಇರುವ ಅವರಿಗೆ ಸಚಿವ ಸ್ಥಾನ ಹಾಗೂ ಡಿಸಿಎಂ ಸ್ಥಾನ ನೀಡುವಂತೆ ಕಾಂಗ್ರೆಸ್ ಪಕ್ಷದ ನಾಯಕರನ್ನು ಪ್ರತಿಭಟನಾಕಾರರು ಒತ್ತಾಯಿಸಿದರು.
ತಾಲೂಕು ಸೇರಿದಂತೆ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹರಪನಹಳ್ಳಿ ತಾಲೂಕುಗಳ ರೈತರು ಭಾಗವಹಿಸಿದ್ದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಪಟ್ಟಣ ಠಾಣೆ ಪೊಲೀಸರು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.