ರೈತರ ಸಂಕಷ್ಟ ಸಿಎಂಗೆ ವರದಿ ಸಲ್ಲಿಕೆ

ಕೊಟ್ಟೂರು ತಾಲೂಕಿನ ಗಜಾಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಬರ ವೀಕ್ಷಣೆ ಮಾಡಿದರು. ಶಾಸಕರಾದ ಲತಾ ಮಲ್ಲಿಕಾರ್ಜುನ, ಕೃಷ್ಣನಾಯ್ಕ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಪಂ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಕ್ರಂ ಅಲಿ ಷಾ, ಎಸ್ಪಿ ಎಸ್. ಜಾಹ್ನವಿ, ಉಪವಿಭಾಗಿಯಾಧಿಕಾರಿ ವಿವೇಕಾನಂದ, ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಮಂಜುನಾಥ, ಉಪನಿರ್ದೇಶಕ ಕೊಳ್ಳಿ ವಾಮದೇವ, ತಹಸೀಲ್ದಾರ್ ವಿ.ಕೆ.ನೇತ್ರಾವತಿ ಇತರರಿದ್ದರು.

Published on
ಹರಪನಹಳ್ಳಿ: ರಾಜ್ಯದಲ್ಲಿ ಈ ಬಾರಿ ಮಳೆ ಅಭಾವದಿಂದಾಗಿ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲಾ ಪ್ರವಾಸ ಕೈಗೊಂಡು, ಬೆಳೆ ಹಾನಿ ಹಾಗೂ ಬರ ಪರಿಸ್ಥಿತಿಯ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪ್ರತಿಯೊಂದು ತಾಲೂಕಿಗೂ ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಿದ ಬಳಿಕ ಮುಖ್ಯಮಂತ್ರಿಗಳಿಗೆ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
ಕೊಟ್ಟೂರು ತಾಲೂಕಿನ ಗಜಾಪುರದಲ್ಲಿ ಹಾಗೂ ಹರಪನಹಳ್ಳಿ ತಾಲೂಕಿನ ಪೃಥ್ವೇಶ್ವರದಲ್ಲಿ ಬರ ವೀಕ್ಷಣೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಜಿಲ್ಲೆಯ ಒಟ್ಟು 6 ತಾಲೂಕುಗಳ ವರದಿ ತಯಾರಿಸಲಾಗುವುದು . ಮಳೆ ಕೊರತೆಯಿಂದಾಗಿ ರೈತರು ಪ್ರತಿ ಎಕರೆಗೆ ಕನಿಷ್ಠ 15 ಸಾವಿರ ಖರ್ಚು ಮಾಡಿ ಬೆಳೆದ ಬೆಳೆಗಳು ನಾಶವಾಗಿವೆ. ಬೆಳೆ ವಿಮೆ ಮಾಡಿಸಿದ ಹಾಗೂ ವಿಮೆ ಮಾಡಿಸದ ರೈತರ ಪ್ರತ್ಯೇಕ ಪಟ್ಟಿ ತಯಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಳೆದ ವರ್ಷದ 100 ಕೋಟಿ ರೂ. ವಿಮೆ ಪೈಕಿ ಈಗಾಗಲೇ 64 ಕೋಟಿ ರೂ.ಬಿಡುಗಡೆಯಾಗಿದ್ದು, ಇನ್ನು 34 ಕೋಟಿ ರೂ. ಬರುವುದು ಬಾಕಿಯಿದೆ ಎಂದರು.
ಸಮೀಕ್ಷೆ ವರದಿ ಆಧಾರದ ಮೇಲೆ ಆ.15ರ ನಂತರ ಯಾವ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂಬುದನ್ನು ಮುಖ್ಯಮಂತ್ರಿಗಳು ಸೂಕ್ತ ತೀರ್ಮಾನ ಕೈಗೊಂಡು, ಪರಿಹಾರ ಕ್ರಮಗಳನ್ನು ಪ್ರಕಟಿಸಲಿದ್ದಾರೆ. ಸಂಕಷ್ಟದಲ್ಲಿರುವ ರೈತರಿಗೆ ಸಾಲ ಮರುಪಾವತಿಸುವಂತೆ ಬ್ಯಾಂಕ್‌ಗಳಿಂದ ನೋಟಿಸ್ ನೀಡುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಬಾರಿ ರೈತರಿಗೆ ಹಣ ಪಾವತಿಸಲು ಕಷ್ಟವಾಗುವುದರಿಂದ, ಈ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನೋಟಿಸ್ ನೀಡುವುದನ್ನು ತಡೆಹಿಡಿಯಲಾಗುವುದು ಎಂದರು.
ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 69 ಟಿಎಂಸಿ ನೀರು ಶೇಖರಣೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 80 ಟಿಎಂಸಿ ನೀರಿತ್ತು. ಈ ವರ್ಷ ಮಳೆ ಕಡಿಮೆಯಾಗಿದ್ದರೂ, ಜಲಾಶಯದಿಂದ ಮೊದಲ ಆದ್ಯತೆಯಾಗಿ ಕುಡಿಯುವ ನೀರು ಪೂರೈಸಲಾಗುವುದು. ಇದರಿಂದ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಉತ್ತಮ‌ ಮಳೆಯಾಗಲಿ ಜಲಾಶಯ ತುಂಬಲಿ ಎಂದು ದೇವರಲ್ಲಿ‌ ಬೇಡಿಕೊಳ್ಳೋಣ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net