ಮಾದಕ ವ್ಯಸನದಿಂದ ಯುವಕರನ್ನು ಮುಕ್ತಗೊಳಿಸಿ

ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಜಿಲ್ಲಾ ಮಟ್ಟದ ನಾರ್ಕೋಟಿಕ್ಸ್ ಸಮನ್ವಯ ಸಮಿತಿ ಸಭೆ ನಡೆಸಿದರು. ಎಎಸ್ಪಿ ಮಂಜುನಾಥ, ಅಬಕಾರಿ ಉಪ ಆಯುಕ್ತ ಮಾದೇಶ್ ಇತರರಿದ್ದರು.
ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಜಿಲ್ಲಾ ಮಟ್ಟದ ನಾರ್ಕೋಟಿಕ್ಸ್ ಸಮನ್ವಯ ಸಮಿತಿ ಸಭೆ ನಡೆಸಿದರು. ಎಎಸ್ಪಿ ಮಂಜುನಾಥ, ಅಬಕಾರಿ ಉಪ ಆಯುಕ್ತ ಮಾದೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನಾರ್ಕೋಟಿಕ್ಸ್ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
ಹೊಸಪೇಟೆ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ಸಂಪೂರ್ಣವಾಗಿ ತಡೆಗಟ್ಟಲು ಪೊಲೀಸ್, ಅಬಕಾರಿ ಮತ್ತು ಶಿಕ್ಷಣ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ನಾರ್ಕೋಟಿಕ್ಸ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಂಬಾಕು ಸೇವನೆಯಿಂದ ದೈಹಿಕವಾಗಿ ಮಾನಸಿಕವಾಗಿ ಸಾಕಷ್ಟು ದುಷ್ಪರಿಣಾಮ ಬೀರಲಿದೆ. ಇದರಿಂದ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕಿ ಕುಟುಂಬ ಬೀದಿಗೆ ಬರಲಿದೆ. ಈ ನಿಟ್ಟಿನಲ್ಲಿ ಮದ್ಯ ಮಾದಕ ವಸ್ತುಗಳಿಂದ ದೂರವಿದ್ದು, ಮೌಲ್ಯಯುತವಾದ ಜೀವನ ಕಟ್ಟಿಕೊಳ್ಳುವಂತೆ ಸಲಹೆ ನೀಡಿದರು.
ಶಾಲಾ ಮತ್ತು ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಅಥವಾ ಮಾದಕ ಪದಾರ್ಥಗಳ ಮಾರಾಟ ನಡೆಯದಂತೆ ನೋಡಿಕೊಳ್ಳಬೇಕು. ಶಾಲಾ ಕಾಲೇಜುಗಳ ತಡೆಗೋಡೆ ಅಥವಾ ಸೂಚನಾ ಫಲಕಗಳಲ್ಲಿ ತಂಬಾಕು ನಿಯಂತ್ರಣ ಕುರಿತು ಅಳವಡಿಸಬೇಕು. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಕಾರ್ಯಾಗಾರ ಆಯೋಜಿಸಿ ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ಔಷಧಿ ಅಂಗಡಿಗಳು, ಸಾರಿಗೆ ಬಸ್‌ಗಳಲ್ಲಿ, ಬಸ್ ನಿಲ್ದಾಣ ಮತ್ತು ರೈಲ್ವೇ ನಿಲ್ದಾಣಗಳಲ್ಲಿ ಮಾದಕ ವಸ್ತುಗಳ ಅಕ್ರಮ ಸಾಗಾಟ ಬಗ್ಗೆ ಎಚ್ಚರ ವಹಿಸಬೇಕು ಎಂದರು.
ಮಾದಕ ಮುಕ್ತ ಸಮಾಜ ನಿರ್ಮಾಣಕ್ಕೆ ಇಲಾಖೆಗಳು ಮಾತ್ರವಲ್ಲ, ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಇಂತಹ ಅಕ್ರಮ ಚಟುವಟಿಕೆ ಕಂಡುಬAದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net