ಹೊಸಪೇಟೆಯಲ್ಲಿ ಶುಕ್ರವಾರ ಸಂಜೆ ವಿದ್ಯುತ್ ಉಪಕೇಂದ್ರಕ್ಕೆ ಶಾಸಕ ಎಚ್.ಆರ್.ಗವಿಯಪ್ಪ sÀÆಮಿ ಪೂಜೆ ನೆರವೇರಿಸಿದರು. ಎಸ್ಪಿ ಎಸ್.ಜಾಹ್ನವಿ, ಎಎಸ್ಪಿ ಮಂಜುನಾಥ, ಡಿವೈಎಸ್ಪಿ ಡಾ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮನೋಹರ್ ಇತರರಿದ್ದರು.
ಹೊಸಪೇಟೆ: ಜಿಲ್ಲೆಯ ದೀರ್ಘಕಾಲದ ವಿದ್ಯುತ್ ಸಮಸ್ಯೆಗೆ ಶಾಶ್ವತವಾಗಿ ಸಮಸ್ಯೆ ನೀಗಿಸಲು ಸುಮಾರು 50 ಕೋಟಿ ರೂ. ವೆಚ್ಚದ ವಿದ್ಯುತ್ ಉಪಕೇಂದ್ರ ಹಾಗೂ ರೈತರ ಆಶೋತ್ತರವಾದ ಸಕ್ಕರೆ ಕಾರ್ಖಾನೆಯ ಪುನಶ್ಚೇತನಗೊಳಿಸಲಾಗುವುದು ಎಂದು ಶಾಸಕ ಎಚ್.ಆರ್.ಗವಿಯಪ್ಪ ತಿಳಿಸಿದರು.
ನಗರ ಮತ್ತು ತಾಲೂಕಿನ ನಾಗೇನಹಳ್ಳಿಯಲ್ಲಿ ಶುಕ್ರವಾರ ಸಂಜೆ ಎರಡು ವಿದ್ಯುತ್ ಉಪಕೇಂದ್ರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಉಂಟಾಗುತ್ತಿರುವ ವಿದ್ಯುತ್ ವ್ಯತ್ಯಯಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಎರಡು ಬೃಹತ್ ಸಬ್‌ಸ್ಟೇಷನ್‌ಗಳ ಸ್ಥಾಪನೆಗೆ ಚಾಲನೆ ನೀಡಲಾಗಿದೆ.
ತಾಲೂಕಿನ ನಾಗನಹಳ್ಳಿ ಸಬ್‌ಸ್ಟೇಷನ್ 23.26 ಕೋಟಿ ರೂ. ವೆಚ್ಚದಲ್ಲಿ ಹಾಗೂ ನಗರದ 27 ಕೋಟಿ ರೂ. ವೆಚ್ಚದಲ್ಲಿ ಮತ್ತೊಂದು ಸಬ್‌ಸ್ಟೇಷನ್ ಸೇರಿ ಒಟ್ಟು 50 ಕೋಟಿ ರೂ. ವೆಚ್ಚದ ನೂತನ ವಿದ್ಯುತ್ ಉಪಕೇಂದ್ರ ಸ್ಥಾಪಿಸಲಾಗುವುದು. ಅದಷ್ಟೇ ಅಲ್ಲದೇ ರಾಯರಕೆರೆಯ ಹಳೆಯ ಸಬ್‌ಸ್ಟೇಷನ್ ಅನ್ನು 2*20 ಎಂವಿಎ ಸಾಮರ್ಥ್ಯಕ್ಕೆ ಏರಿಸಲಾಗುತ್ತಿದ್ದು, ಇದರಿಂದ ಈ ಭಾಗದ ಜನತೆಗೆ 24*7 ವಿದ್ಯುತ್ ದೊರೆಯಲಿದೆ.
ಈ ಯೋಜನೆಗಳು 2027ರ ಸೆಪ್ಟೆಂಬರ್ ವೇಳೆಗೆ ಪೂರ್ಣಗೊಂಡು ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ. ಕಾಮಗಾರಿ ಪೂರ್ಣಗೊಂಡ ನಂತರ ತೋರಣಗಲ್ಲು ಮತ್ತು ಮುನಿರಾಬಾದ್ ಲೈನ್‌ಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದ್ದು, ಸ್ಥಳೀಯವಾಗಿ ವಿದ್ಯುತ್ ನಿರ್ವಹಣೆ ಸುಲಭವಾಗಲಿದೆ ಎಂದರು.
ಎಸ್ಪಿ ಎಸ್.ಜಾಹ್ನವಿ, ಎಎಸ್ಪಿ ಮಂಜುನಾಥ, ಡಿವೈಎಸ್ಪಿ ಡಾ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮನೋಹರ್, ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಅಭಿಯಂತರ ಎಚ್.ಎಂ.ನಟರಾಜ, ತಹಶೀಲ್ದಾರ್ ಶೃತಿ ಎಂ.ಮಳ್ಳಪ್ಪಗೌಡ್ರ್, ತಾಲೂಕು ಪಂಚಾಯಿತಿ ಇಒ ಆಲಂ ಭಾಷಾ ಇತರರಿದ್ದರು.