ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಸಿ

ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಮುಂದೆ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘದಿAದ ಬುಧವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಿದರು. ಪ್ರಮುಖರಾದ ಎಂ.ಜAಬಯ್ಯನಾಯಕ, ತಾಯಪ್ಪ ನಾಯಕ, ಮಾರಿಯಮ್ಮ ಓಬಮ್ಮ, ಶಂತಾಮ್ಮ ಇತರರಿದ್ದರು.
ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಮುಂದೆ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘದಿAದ ಬುಧವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಿದರು. ಪ್ರಮುಖರಾದ ಎಂ.ಜAಬಯ್ಯನಾಯಕ, ತಾಯಪ್ಪ ನಾಯಕ, ಮಾರಿಯಮ್ಮ ಓಬಮ್ಮ, ಶಂತಾಮ್ಮ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಒತ್ತಾಯ
ಹೊಸಪೇಟೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘದಿAದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಯಿತು.
ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಹಾಸ್ಟೆಲ್ ಹಾಗೂ ವಸತಿ ನಿಲಯಗಳಲ್ಲಿ ಕಳೆದ 15-20 ವರ್ಷಗಳಿಂದ ಕೆಲಸ ಮಾಡುತಿರುವ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಜಾರಿ ಮಾಡಬೇಕು. ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ, ಖಾಯಂ ಮಾಡಬೇಕು. ಪಿಎಫ್, ಇಎಸ್‌ಐ ಕಟ್ಟದೆ ಇರುವ ಖಾಸಗಿ ಏಜನ್ಸಿಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಬೀದರ್ ಮಾದರಿ ಸೊಸೈಟಿಯನ್ನು ಪ್ರಾರಂಭಿಸಬೇಕು. ನೌಕರರಿಗೆ ಕಿರುಕುಳ ಕೊಡುವ ವಾರ್ಡನ್‌ಗಳ ಮೇಲೆ ಕ್ರಮ ಕೈಗೊಳ್ಳಬೇಕು. ಏಪ್ರಿಲ್ ಮತ್ತು ಮೇ ತಿಂಗಳ ಅವಧಿಯಲ್ಲಿ ಹಾಸ್ಟೆಲ್ ನೌಕರರಿಗೆ ರಜಾ ಸಹಿತ ವೇತನ ನೀಡಬೇಕು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸೇವಾ ಭದ್ರತೆ ನೀಡಬೇಕು. ವಸತಿ ಶಾಲೆಗಳಿಗೆ ಸಿಬ್ಬಂದಿಗಳ ಸಂಖ್ಯೆ 11ಕ್ಕೆ ಹೆಚ್ಚಿಸಬೇಕು. ಆರೋಗ್ಯ ಸಂಜೀವಿನಿ ಕಾರ್ಡ್ ಕೊಡಬೇಕು. ಕನ್ನಡ ವಿವಿಯ ಹೊರಗುತ್ತಿಗೆ ನೌಕರರಿಗೆ ಪಾವತಿ ಮಾಡಬೇಕಾದ 8 ತಿಂಗಳ ಸಂಬಳ ತಕ್ಷಣ ಪಾವತಿ ಮಾಡಬೇಕು. ವಿವಿಯ ಏಜೆನ್ಸಿ ಕನಿಷ್ಠ ವೇತನ ಪಾವತಿ ಮಾಡದೆ, ಪಿಎಫ್, ಇಎಸ್‌ಐ ಸರ್ಕಾರಕ್ಕೆ ಪಾವತಿಮಾಡದೇ ವಂಚನೆ ಮಾಡಿದೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net