ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತೆ, ಭಕ್ತರು ರಥೋತ್ಸವಕ್ಕೆ ಉತ್ತುತ್ತಿ ಹಾಗೂ ಬಾಳೆಹಣ್ಣು ಸಮರ್ಪಿಸಿ ಭಕ್ತಿ ಹರಕೆ ತೀರಿಸಿದರು. ರಥೋತ್ಸವದ ಮುಂದೆ ಡೊಳ್ಳಿನ ಮೇಳ ಹಾಗೂ ವಿವಿಧ ವಾದ್ಯ ಮೇಳಗಳು ಗಮನ ಸೆಳೆದವು. ರಥೋತ್ಸವವು ತುಂಗಭದ್ರಾ ಕಾಲೂವೆ ವರೆಗೆ ತಲುಪಿ ನಂತರ ವಾಪಸಾಯಿತು. ರಥೋತ್ಸವ ಯಶಸ್ವಿಯಾಗಿ ಮರಳಿ ಸ್ಥಳಕ್ಕೆ ಬಂದು ನಿಂತಾಗ ಭಕ್ತರು ಚಪ್ಪಾಳೆ ತಟ್ಟಿ ಹರ್ಷವನ್ನು ವ್ಯಕ್ತಪಡಿಸಿದರು.