ಹೆಣ್ಣು ಮಕ್ಕಳು ಸಮಾಜದ ಶಕ್ತಿ

ಹೊಸಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಬೇಟಿ ಬಚಾವೋ, ಬೇಟಿ ಪಡಾವೋ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಗಂಗಪ್ಪ ಉದ್ಘಾಟಿಸಿ ಮಾತನಾಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ನೋಡಲ್ ಅಧಿಕಾರಿ ನಾಗರಾಜ್ ಹವಾಲ್ದಾರ್, ಜಿಲ್ಲಾಅಂಗವಿಕಲ ಅಧಿಕಾರಿ ಅನುಪಮಾ, ಜಿಲ್ಲಾ ಮಿಷನ್ಹೆ ಶಕ್ತಿ ಯೋಜನೆ ಸಂಯೋಜಕಿ ವಿದ್ಯಬಾಯಿ, ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳಾದ ಭೋಜರಾಜ್, ಅನ್ನಪೂರ್ಣ, ಬಶೀರ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಗಂಗಪ್ಪ ಕರೆ
ಹೊಸಪೇಟೆ: ಸಮಾಜದಲ್ಲಿ ಹೆಣ್ಣು ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟುವುದು, ಲಿಂಗ ತಾರತಮ್ಯವನ್ನು ಹೋಗಲಾಡಿಸುವುದು ಮತ್ತು ಬಾಲಕಿಯರಿಗೆ ಉನ್ನತ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಗಂಗಪ್ಪ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ಬಾಲಕಿಯರ ರಕ್ಷಣೆ, ಶಿಕ್ಷಣ ಹಾಗೂ ಸಬಲೀಕರಣದ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೆಣ್ಣು ಮಕ್ಕಳು ಸಮಾಜದ ಶಕ್ತಿ. ಅವರ ರಕ್ಷಣೆ ಹಾಗೂ ಶಿಕ್ಷಣದ ಹಕ್ಕನ್ನು ಖಚಿತಪಡಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಬೇಕು. ಶಿಕ್ಷಣವೇ ಬಾಲಕಿಯರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣದ ಪ್ರಬಲ ಅಸ್ತ್ರವಾಗಿದೆ. ಪ್ರತಿಯೊಬ್ಬರೂ ಈ ಅಭಿಯಾನಕ್ಕೆ ಕೈಜೋಡಿಸಿ. ಹೆಣ್ಣು ಮಕ್ಕಳು ನಿರ್ಭೀತಿಯಿಂದ ತಮ್ಮ ಕನಸುಗಳನ್ನು ನನಸು ಮಾಡಲು ಪೂರಕವಾದ ವಾತಾವರಣ ನಿರ್ಮಿಸುವ ಸಂಕಲ್ಪ ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net