ಸ್ವಚ್ಛತೆಯಿಂದ ಉತ್ತಮ ಆರೋಗ್ಯ

ಹೂವಿನಹಡಗಲಿ ತಾಲೂಕು ಕ್ರೀಡಾಂಗಣದಲ್ಲಿ ಪುರಸಭೆಯಿಂದ ಸ್ವಚ್ಛೋತ್ಸವ ನಡೆಯಿತು.
ಹೂವಿನಹಡಗಲಿ ತಾಲೂಕು ಕ್ರೀಡಾಂಗಣದಲ್ಲಿ ಪುರಸಭೆಯಿಂದ ಸ್ವಚ್ಛೋತ್ಸವ ನಡೆಯಿತು.
Published on
ಹೂವಿನಹಡಗಲಿ: ಆರೋಗ್ಯಯುತ ಸಮಾಜ ನಿರ್ಮಾಣ ಮಾಡಲು ನಮ್ಮ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡುವುದು ನಮ್ಮದೇ ಜವಾಬ್ದಾರಿಯಾಗಿದೆ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಪುರಸಭೆಯಿಂದ ಆಯೋಜಿಸಿದ್ದ ಸ್ವಚ್ಛತೆ ಕಾರ್ಯಕ್ರಮ ಉದ್ಘಾಟಿಸಿ ಬುಧವಾರ ಮಾತನಾಡಿದರು. ಸ್ವಚ್ಛತೆಯಿಂದ ಉತ್ತಮ ಆರೋಗ್ಯ ದೊರೆಯಲಿದೆ. ಮಾನಸಿಕ ಆರೋಗ್ಯದ ಜತೆಗೆ ದೈಹಿಕ ಆರೋಗ್ಯವೂ ಮುಖ್ಯವಾಗಿದೆ ಎಂದರು.
ತಾಲೂಕು ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಹೊರಾಂಗಣ ಕ್ರೀಡಾಂಗಣ ಕಾಮಗಾರಿಯೊಂದಿಗೆ ಒಳಾಂಗಣ ಕ್ರೀಡಾಂಗಣವನ್ನೂ ಅಭಿವೃದ್ಧಿಗೊಳಿಸಲಾಗುವುದು. ಪಟ್ಟಣದ ಪ್ರತಿ ವಾರ್ಡಿನಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲ ಕಡೆ ಬೀದಿದೀಪಗಳನ್ನು ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಸಾರ್ವಜನಿಕರು ನಗರವನ್ನು ಸ್ವಚ್ಛವಾಗಿಡಲು ಪುರಸಭೆ ಸಿಬ್ಬಂದಿಯೊಂದಿಗೆ ಸಹಕರಿಸಿ ಎಂದರು.
ಪುರಸಭೆ ಮುಖ್ಯಾಧಿಕಾರಿ ಹನುಮಂತಪ್ಪ, ಹಿರಿಯ ಆರೋಗ್ಯ ನಿರೀಕ್ಷಕ ಮಾರುತಿ, ಕಿರಿಯ ಆರೋಗ್ಯ ನಿರೀಕ್ಷಕ ಸೋಮಶೇಖರ, ಪ್ರಮುಖರಾದ ಸಿರಾಜ್ ಬಾವಿಹಳ್ಳಿ, ವಾರದ ಗೌಸ್ ಮೊಹಿದ್ದೀನ್, ವಿಶ್ವನಾಥ ಎಂ., ಪುನೀತ್ ದೊಡ್ಡಮನಿ, ಪ್ರಕಾಶ್, ವಿಜಯಲಕ್ಷ್ಮೀ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net