ಕೃಷಿ ಇಲಾಖೆಯಲ್ಲಿ ಉತ್ತಮ ಯೋಜನೆಗಳು ಜಾರಿ

ಹಗರಿಬೊಮ್ಮನಹಳ್ಳಿ ತಾಲೂಕು ಆಡಳಿತ ಸೌಧದಲ್ಲಿ ಡಾ.ಬಾಬುಜಗಜೀವನರಾಮ್ ಜಯಂತ್ಯುತ್ಸವ ಆಚರಿಸಲಾಯಿತು.
ಹಗರಿಬೊಮ್ಮನಹಳ್ಳಿ ತಾಲೂಕು ಆಡಳಿತ ಸೌಧದಲ್ಲಿ ಡಾ.ಬಾಬುಜಗಜೀವನರಾಮ್ ಜಯಂತ್ಯುತ್ಸವ ಆಚರಿಸಲಾಯಿತು.
Published on
ಹಗರಿಬೊಮ್ಮನಹಳ್ಳಿ: ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಮ್ ಅವರು ಕೇಂದ್ರ ಸರ್ಕಾರದಲ್ಲಿ ನಾನಾ ಖಾತೆಗಳನ್ನು ನಿರ್ವಹಿಸಿದ್ದಾರೆ ಎಂದು ತಹಸೀಲ್ದಾರ್ ಆರ್.ಕವಿತಾ ಹೇಳಿದರು.
ತಾಲೂಕು ಆಡಳಿತ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಬಾಬು ಜಗಜೀವನರಾಮ್ ಜಯಂತ್ಯುತ್ಸವದಲ್ಲಿ ಭಾನುವಾರ ಮಾತನಾಡಿದರು. ದೇಶದ ಜನರು ಹಸಿವಾದಾಗ ಅನ್ನದ ದಾರಿ ಹುಡುಕಿ ಕೃಷಿಗೆ ಸಂಬಂಧಿಸಿದ ಉತ್ತಮ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಹಸಿರು ಕ್ರಾಂತಿಯ ಹರಿಕಾರರಾದರು. ರಕ್ಷಣಾ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿದರು. ಬಾಬೂಜಿ ಮಾರ್ಗದರ್ಶನಗಳು ಎಂದಿಗೂ ಪ್ರಸ್ತುತವಾಗಿವೆ ಎಂದು ವಿವರಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಸಂಘದ ತಾಲೂಕು ಅಧ್ಯಕ್ಷ ಗದ್ದಿಕೆರೆ ಎಚ್.ದೊಡ್ಡಬಸಪ್ಪ ಮಾತನಾಡಿ, ಭಾರತೀಯ ಕೃಷಿಯನ್ನು ಆಧುನೀಕರಿಸಲು ಯತ್ನಿಸಿ ಯಶಸ್ವಿಯಾದ ಬಾಬು ಜಗಜೀವನರಾಮ್ ಅವರು ಜನರ ಮನದಾಳದಲ್ಲಿ ಬಾಬೂಜಿಯಾಗಿ ನೆಲೆಸಿದ್ದಾರೆ ಎಂದರು.
ಬಾಬು ಜಗಜೀವನರಾಮ್ ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಆನಂದಳ್ಳಿ ಪ್ರಭಾಕರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ ಈ.ದಿಡುಗೂರು, ಮ್ಯಾನೇಜರ್ ಶೋಭಾ, ಸುಧಾ ಕರ್ಣಂ, ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಸಿ.ಬಸವರಾಜ, ಅಲೆಮಾರಿ ಸಂಘದ ತಾಲೂಕು ಅಧ್ಯಕ್ಷ ಮಲ್ಲೇಶಪ್ಪ, ಅಂಬೇಡ್ಕರ್ ಸ್ವಾಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಕೋಗಳಿ ಉಮೇಶ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net