ಹರಪನಹಳ್ಳಿ: ಅರಸೀಕೆರೆ ಹೋಬಳಿಯ ಹೀರೆಮೆಗಳಗೆರೆ, ಉಚ್ಚಂಗಿದುರ್ಗ, ಚಟ್ನಿಹಳ್ಳಿ, ಕಂಚಿಕೇರೆ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ ಉತ್ತಮ ಮಳೆ ಸುರಿಯಿತು.
ಮಧ್ಯಾಹ್ನ 3 ರ ಸುಮಾರಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರವಾಗಿ ಸುರಿಯಿತು. ಮಳೆಯಿಂದಾಗಿ ತಗ್ಗು ಪ್ರದೇಶದ ಜಮೀನುಗಳಲ್ಲಿ ನೀರು ಸಂಗ್ರಹವಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಹೋಬಳಿ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಉತ್ತಮ ಮಳೆಯಾಗುತ್ತಿದೆ.
ರೋಹಿಣಿ ಮಳೆ ಕೊರತೆ ನಡುವೆಯೂ ರೈತರು ಬಿತ್ತನೆಗೆ ಅಗತ್ಯವಿರುವ ಬೀಜ ಹಾಗೂ ರಸಗೊಬ್ಬರ ಸಂಗ್ರಹ ಮಾಡಿಕೊಂಡಿದ್ದಾರೆ. ಇದಈಗ ಕೃತಿಕ ಮಳೆ ಸುರಿಯುತ್ತಿರುವುದರಿಂದ ಭೂಮಿ ಹದ ಕಾರ್ಯ ಭರದಿಂದ ಸಾಗಿದೆ.