ಸರ್ಕಾರಿ ಶಾಲೆ ಮುಚ್ಚಲು ಸರ್ಕಾರ ಯತ್ನ

ಹಗರಿಬೊಮ್ಮನಹಳ್ಳಿ ತಾಲೂಕಿನ ಉಪನಾಯಕನಹಳ್ಳಿ ಸ.ಹಿ.ಪ್ರಾ.ಶಾಲೆ ಮುಚ್ಚದಂತೆ ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಗ್ರಾಮದಲ್ಲಿ ಪ್ರತಿಭಟನೆ ನಡೆಯಿತು.
ಹಗರಿಬೊಮ್ಮನಹಳ್ಳಿ ತಾಲೂಕಿನ ಉಪನಾಯಕನಹಳ್ಳಿ ಸ.ಹಿ.ಪ್ರಾ.ಶಾಲೆ ಮುಚ್ಚದಂತೆ ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಗ್ರಾಮದಲ್ಲಿ ಪ್ರತಿಭಟನೆ ನಡೆಯಿತು.
Published on
ಹಗರಿಬೊಮ್ಮನಹಳ್ಳಿ: ಉಪನಾಯಕನಹಳ್ಳಿ ಸ.ಹಿ.ಪ್ರಾ.ಶಾಲೆ ಮುಚ್ಚಬಾರದು ಎಂದು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರು ಗ್ರಾಮದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ಜೆ.ಪಿ.ರವಿಕಿರಣ್ ಮಾತನಾಡಿ, ಉಪನಾಯಕನಹಳ್ಳಿ ಸ.ಹಿ.ಪ್ರಾ.ಶಾಲೆಯನ್ನು ಮುಚ್ಚಿ ವರದಾಪುರದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ. ಉಪನಾಯಕನಹಳ್ಳಿಯಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ವರದಾಪುರದ ಕೆಪಿಎಸ್ ಶಾಲೆಗೆ ಐದು ವರ್ಷದ ಮಕ್ಕಳು ಹೋಗಲು ಆಗುವುದಿಲ್ಲ. ಪ್ರತಿಯೊಂದು ಮಗುವಿಗೂ ಶಿಕ್ಷಣ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ, ಸರ್ಕಾರಗಳು ಬಡ ಮಕ್ಕಳಿಂದ ಶಿಕ್ಷಣ ಕಿತ್ತುಕೊಳ್ಳುತ್ತಿವೆ ಎಂದು ಆರೋಪಿಸಿದರು.
ಜಿಲ್ಲಾ ಕಾರ್ಯದರ್ಶಿ ಯು.ಉಮಾದೇವಿ, ಸದಸ್ಯರಾದ ಶ್ರೀನಿವಾಸ, ಎಸ್‌ಡಿಎಮ್‌ಸಿ ಅಧ್ಯಕ್ಷ ವಿ.ಉಮೇಶ್, ಗ್ರಾ.ಪಂ. ಸದಸ್ಯರಾದ ಪರಶುರಾಮ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net