ಚಾಲಕನ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಹೂವಿನ ಹಡಗಲಿ ಡಿಪೋಗೆ ಸೇರಿದ ಬಸ್‌ನಲ್ಲಿ ಸುಮಾರು 45 ಪ್ರಯಾಣಿಕರಿದ್ದರು. ಕೆಲ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಘಟಕದ ಸಾರಿಗೆ ನಿರೀಕ್ಷಕ ಸಂತೋಷ್ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.