ಅಂಗವಿಕಲರಿಗೆ ಸರ್ಕಾರದ ಸೌಲಭ್ಯ ಸಿಗಲಿ

ಹೊಸಪೇಟೆ ಜಿಲ್ಲಾ ಒಳ ಕ್ರಿಡಾಂಗಣ ಸಭಾಂಗಣದಲ್ಲಿ ಮಂಗಳವಾರ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಒಂದು ದಿನದ ಕಾರ್ಯಗಾರವನ್ನು ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆ ಅಧಿಕಾರಿ ರಾಮಾಂಜಿನೇಯ ಚಾಲನೆ ನೀಡಿದರು. ಸಿಡಿಪಿಒ ಸಿಂಧೂ ಎಲೆಗಾರ, ವೈದ್ಯಾರಾದ ಡಾ.ಚೈತ್ರ, ಡಾ.ತಸ್ಮೀಯ, ಡಾ.ಕಾವ್ಯ ಇತರರಿದ್ದರು.
ಹೊಸಪೇಟೆ ಜಿಲ್ಲಾ ಒಳ ಕ್ರಿಡಾಂಗಣ ಸಭಾಂಗಣದಲ್ಲಿ ಮಂಗಳವಾರ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಒಂದು ದಿನದ ಕಾರ್ಯಗಾರವನ್ನು ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆ ಅಧಿಕಾರಿ ರಾಮಾಂಜಿನೇಯ ಚಾಲನೆ ನೀಡಿದರು. ಸಿಡಿಪಿಒ ಸಿಂಧೂ ಎಲೆಗಾರ, ವೈದ್ಯಾರಾದ ಡಾ.ಚೈತ್ರ, ಡಾ.ತಸ್ಮೀಯ, ಡಾ.ಕಾವ್ಯ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆ ಅಧಿಕಾರಿ ರಾಮಾಂಜಿನೇಯ ಸೂಚನೆ
ಹೊಸಪೇಟೆ: ಅಂಗವಿಕಲರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಮುಟ್ಟುವುದಕ್ಕೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ದೊಡ್ಡದಿದೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆ ಅಧಿಕಾರಿ ರಾಮಾಂಜಿನೇಯ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಹಯೋಗದಲ್ಲಿ ನಗರದ ಜಿಲ್ಲಾ ಒಳ ಕ್ರಿಡಾಂಗಣ ಸಭಾಂಗಣದಲ್ಲಿ ಮಂಗಳವಾರ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಒಂದು ದಿನದ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಪ್ರತಿ ಮನೆಗಳಿಗೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ತೆರಳಿ ನೀವು ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವುದರಿಂದ ಅಂಗವಿಕಲತೆ ಇರುವವರನ್ನ ಪತ್ತೆ ಹಚ್ಚುವುದಕ್ಕೆ ಸಾಧ್ಯವಾಗುತ್ತದೆ. ನೀವು ಗುರುತಿಸಿ ಇಲಾಖೆಗೆ ಮಾಹಿತಿ ನೀಡಿದರೆ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನ ನೀಡುವುದಕ್ಕೆ ಸಾಧ್ಯವಾಗುತ್ತದೆ. ನಿಮ್ಮ ಗಮನಕ್ಕೆ ವೃದ್ಧರು, ಮಕ್ಕಳು ಕಂಡು ಬಂದಲ್ಲಿ ಇಲಾಖೆಗೆ ತಿಳಿಸಿ. ಅಂಗವಿಕಲರಿಗೆ ಶೇ.5 ಅನುದಾನ ಮೀಸಲು ಇರುತ್ತದೆ. ಈ ಅನುದಾನ ಅಂಗವಿಕಲರ ಶ್ರಯೋಭಿವೃದ್ಧಿಗೆ ಮಾತ್ರ ಮೀಸಲು ಇರುತ್ತೆ ಇದನ್ನ ಸರಿಯಾಗಿ ಬಳಕೆ ಮಾಡಿಕೊಳ್ಳಬೇಕಿದೆ ಎಂದರು.
ಸಿಡಿಪಿಒ ಸಿಂಧೂ ಎಲೆಗಾರ ಮಾತನಾಡಿ, ಸರ್ಕಾರದ ಸೌಲಭ್ಯಗಳು ಅಂಗವಿಕಲರಿಗೆ ಲಭ್ಯವಾಗಬೇಕಾದರೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಪಾತ್ರ ದೊಡ್ಡದಿದೆ. ಸರಿಯಾಗಿ ಕೆಲಸ ಮಾಡಿದರೆ, ಅಂಗವಿಕಲರು ಸೌಲಭ್ಯದಿಂದ ವಂಚಿತರಾಗಲ್ಲ ಎಂದರು.
ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಂಸ್ಥೆಯ ಅಧ್ಯಕ್ಷ ಯು.ಭೀಮರಾಜ, ವೈದ್ಯಾರಾದ ಡಾ.ಚೈತ್ರ, ಡಾ.ತಸ್ಮೀಯ, ಡಾ.ಕಾವ್ಯ, ಡಾ.ಸಿದ್ದಲಿಂಗಯ್ಯ, ರಾಘವೇಂದ್ರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net