ಶಿಬಿರಗಳಲ್ಲಿ ಆರೋಗ್ಯ ಜಾಗೃತಿ ಮೂಡಲಿ

ಹೊಸಪೇಟೆ ಚಿತ್ತವಾಡ್ಗಿಯ ಜಾಮೀಯಾ ಮಸೀದ್ ಶಾದಿಮಹಲ್‌ನಲ್ಲಿ ಭಾನುವಾರ ಆರೋಗ್ಯ ತಪಾಸಣೆ ಶಿಬಿರದಲ್ಲಿ ಹುಡಾ ಅಧ್ಯಕ್ಷ ಎಚ್.ಎನ್.ಮೊಹಮ್ಮದ್ ಇಮಾಮ್ ನಿಯಾಜಿ ಮಾತನಾಡಿದರು. ಅಂಜುಮನ್ ಕಮಿಟಿಯ ಪದಾಧಿಕಾರಿಗಳಾದ ಅನ್ಸರ್ ಭಾಷ, ಡಾ.ದುರ್ವೇಶ್ ಮೈನುದ್ದೀನ್, ಪ್ರಮುಖರಾದ ಖಜಾಹುಸೇನ್ ನಿಯಾಜಿ, ಗಫೂರ್ ಸಾಬ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಹುಡಾ ಅಧ್ಯಕ್ಷ ಎಚ್.ಎನ್.ಮೊಹಮ್ಮದ್ ಇಮಾಮ್ ನಿಯಾಜಿ ಕರೆ
ಹೊಸಪೇಟೆ: ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಮತ್ತು ಇಲ್ಲಿನ ಚಿತ್ತವಾಡ್ಗಿಯ ಜಾಮೀಯಾ ಮಸೀದ್ ಶಾದಿಮಹಲ್ ಕಮಿಟಿಯಿಂದ ಶಾದಿಮಹಲ್‌ನಲ್ಲಿ ಭಾನುವಾರ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ಹುಡಾ ಅಧ್ಯಕ್ಷ ಎಚ್.ಎನ್.ಮೊಹಮ್ಮದ್ ಇಮಾಮ್ ನಿಯಾಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಬಿರದಲ್ಲಿ ನೂರಾರು ಜನರು ಭಾಗವಹಿಸಿ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ಈ ಶಿಬಿರ ಬಹಳ ಉಪಯುಕ್ತವಾಗಿದೆ. ಸಾರ್ವಜನಿಕರ ಆರೋಗ್ಯ ಜಾಗೃತಿ ಹೆಚ್ಚಿಸುವ ನಿಟ್ಟಿನಲ್ಲಿ ಇಂತಹ ಶಿಬಿರಗಳನ್ನು ಮುಂದುವರೆಸಲಾಗುವುದು ಎಂದರು.
ಸಾಮಾನ್ಯ ಆರೋಗ್ಯ ತಪಾಸಣೆ, ಹೃದಯ ರೊಗ , ನರರೋಗ, ಮೂತ್ರಪಿಂಡದ ಕಲ್ಲುಗಳು, ಕ್ಯಾನ್ಸರ್ ರಕ್ತದೊತ್ತಡ, ಮಧುಮೇಹ ಪರೀಕ್ಷೆ ಸೇರಿದಂತೆ ನಾನಾ ಪರೀಕ್ಷೆಗಳನ್ನು ನಡೆಸಿದರು. ಅಲ್ಲದೆ, ರೋಗಿಗಳ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ಅಗತ್ಯ ಸಲಹೆ ಹಾಗೂ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು.
ಅಂಜುಮನ್ ಕಮಿಟಿಯ ಪದಾಧಿಕಾರಿಗಳಾದ ಅನ್ಸರ್ ಭಾಷ, ಡಾ.ದುರ್ವೇಶ್ ಮೈನುದ್ದೀನ್, ಪ್ರಮುಖರಾದ ಖಜಾಹುಸೇನ್ ನಿಯಾಜಿ, ಗಫೂರ್ ಸಾಬ್, ಆತಾಯ ರಸೂಲ್, ಜಾಕೀರ್ ಹುಸೇನ್, ಮಾಳಗಿ ಗೌಸ್ ಅಜಾಮ್, ಚಾಂದ್ ಭಾಷ, ನಾಸೀರ್ ಅಲಿ, ಜೀಲಾನ್ ಭಾಷ, ಮನ್ಸೂರ್, ಮೆಹಬೂಬ್ ಸಾಬ್, ಮೆಹಬೂಬ್, ಮುಕ್ತಿಯಾರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net