ಐಸ್‌ಕ್ರೀಮ್ ಮಾದರಿ ಪ್ರಯೋಗಾಲಯಕ್ಕೆ

ಹೂವಿನಹಡಗಲಿ ಕೈಗಾರಿಕಾ ಪ್ರದೇಶದಲ್ಲಿರುವ ಐಸ್‌ಕ್ರೀಮ್ ತಯಾರಿಕಾ ಘಟಕದಲ್ಲಿ ತಹಸೀಲ್ದಾರ್ ಕೆ.ಎಂ.ಗುರುಬಸವರಾಜ ನೇತೃತ್ವದಲ್ಲಿ ಅಧಿಕಾರಿಗಳು ಐಸ್‌ಕ್ರೀಮ್ ತಯಾರಿಗೆ ಬಳಸಲಾಗುವ ಸಾಮಗ್ರಿಗಳನ್ನು ಪರಿಶೀಲಿಸಿದರು.
ಹೂವಿನಹಡಗಲಿ ಕೈಗಾರಿಕಾ ಪ್ರದೇಶದಲ್ಲಿರುವ ಐಸ್‌ಕ್ರೀಮ್ ತಯಾರಿಕಾ ಘಟಕದಲ್ಲಿ ತಹಸೀಲ್ದಾರ್ ಕೆ.ಎಂ.ಗುರುಬಸವರಾಜ ನೇತೃತ್ವದಲ್ಲಿ ಅಧಿಕಾರಿಗಳು ಐಸ್‌ಕ್ರೀಮ್ ತಯಾರಿಗೆ ಬಳಸಲಾಗುವ ಸಾಮಗ್ರಿಗಳನ್ನು ಪರಿಶೀಲಿಸಿದರು.
Published on
ಹೂವಿನಹಡಗಲಿ: ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿರುವ ಐಸ್‌ಕ್ರೀಮ್ ತಯಾರಿಕಾ ಘಟಕಗಳ ಮೇಲೆ ತಹಸೀಲ್ದಾರ್ ಕೆ.ಎಂ.ಗುರುಬಸವರಾಜ ನೇತೃತ್ವದಲ್ಲಿ ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ಮಾದರಿಗಳನ್ನು ಸಂಗ್ರಹಿಸಿದರು.
ಈ ಕುರಿತು ಪ್ರತಿಕ್ರಯಿಸಿದ ತಹಸೀಲ್ದಾರ್ ಕೆ.ಎಂ.ಗುರುಬಸವರಾಜ ಐಸ್‌ಕ್ರೀಮ್ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಬೇಸಿಗೆ ಹಿನ್ನೆಲೆಯಲ್ಲಿ ಐಸ್‌ಕ್ರೀಮ್‌ಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಐಸ್‌ಕ್ರೀಮ್ ತಯಾರಿಕಾ ಘಟಕದವರು ಕಳಪೆ ಬಣ್ಣ ಹಾಗೂ ಅವಧಿ ಮೀರಿದ ಪದಾರ್ಥಗಳನ್ನು ಬಳಸುವ ಮೂಲಕ ಐಸ್‌ಕ್ರೀಮ್ ತಯಾರಿಸುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಕೈಗಾರಿಕೆ ಪ್ರದೇಶದಲ್ಲಿರುವ ಐಸ್‌ಕ್ರೀಮ್ ತಯಾರಿಕಾ ಘಟಕಗಳಿಗೆ ಭೇಟಿ ನೀಡಿದಾಗ ಸ್ವಚ್ಛತೆ ಇಲ್ಲದಿರುವುದರಿಂದ ದುರ್ನಾತ ಬೀರುವುದು ಕಂಡುಬಂದಿದೆ. ಪ್ರಯೋಗಾಲಯದ ವರದಿ ಬಂದ ನಂತರ ಘಟಕಗಳ ವಿರುದ್ಧ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಾಲೂಕ ವೈದ್ಯಾಧಿಕಾರಿ ಅಶೋಕ, ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಕೆ.ಮಾರುತಿ, ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net