ಆಹಾರ ನಿರೀಕ್ಷಕ ಅಜೀತ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಂಗ್ರಹಿಸಿದ 34,843 ರೂ. ಮೌಲ್ಯದ 15.30 ಕ್ವಿಂಟಲ್ ಅಕ್ಕಿಯನ್ನು ವಶಕ್ಕೆ ಪಡೆಯುಲಾಗಿದೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.