ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಮಹಿಳಾ ಮೀಸಲು ವಿಷಯ ಹೊಸದೇನಲ್ಲ. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಮಂಡನೆಯಾಗಿತ್ತು. ಆದರೆ, ವಿರೋಧದ ಹಿನ್ನೆಲೆಯಲ್ಲಿ ಅದು ಜಾರಿಯಾಗದೆ ಉಳಿಯಿತು. ಪ್ರಸ್ತುತ ಕ್ಷೇತ್ರ ಪುನರ್ವಿಂಗಡಣೆ ವಿಚಾರ ಗಂಭೀರ ಚರ್ಚೆಗೆ ಒಳಪಡಬೇಕಾದ ಅಗತ್ಯವಿದೆ. ಜನಸಂಖ್ಯೆ ಆಧಾರಿತವಾಗಿ ಲೋಕಸಭಾ ಕ್ಷೇತ್ರಗಳನ್ನು ಮರುಹಂಚಿಕೆ ಮಾಡುವ ಕ್ರಮದಿಂದ ಉತ್ತರ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಅಸಮತೋಲನವಾಗಿ ಹೆಚ್ಚುವ ಸಾಧ್ಯತೆ ಇದೆ. ಜನಸಂಖ್ಯೆ ನಿಯಂತ್ರಣದಲ್ಲಿ ಯಶಸ್ಸು ಕಂಡ ದಕ್ಷಿಣ ರಾಜ್ಯಗಳಿಗೆ ಇದು ಅನ್ಯಾಯವಾಗಲಿದೆ. ಕೇಂದ್ರ ಸರ್ಕಾರವು ಸಮಗ್ರ ದೃಷ್ಟಿಕೋನದಿಂದ ಈ ವಿಷಯವನ್ನು ಪರಿಶೀಲಿಸಿ, ದಕ್ಷಿಣ ಭಾರತದ ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡುವ ರೀತಿಯಲ್ಲಿ ತೀರ್ಮಾನ ಕೈಗೊಳ್ಳಬೇಕು. ಮಹಿಳಾ ಮೀಸಲು ಜಾರಿಗೆ ತರಬೇಕಾದರೆ, ಸಮನ್ಯಾಯ ಹಾಗೂ ಸಮತೋಲನವನ್ನು ಕಾಪಾಡುವ ರೀತಿಯಲ್ಲಿ ಇರಬೇಕು ಎಂದರು.