ಕೆರೆ ತುಂಬಿಸುವ ಯೋಜನೆ ಅವ್ಯವಹಾರ ತನಿಖೆ ಮಾಡಿ

ಹೊಸಪೇಟೆಯಲ್ಲಿ ಶನಿವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದರು. ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ. ನಾಗರಾಜ್, ತಾಲೂಕು ಅಧ್ಯಕ್ಷ ಸಣ್ಣಕ್ಕಿರುದ್ರಪ್ಪ ಇತರರಿದ್ದರು.
ಹೊಸಪೇಟೆಯಲ್ಲಿ ಶನಿವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದರು. ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ. ನಾಗರಾಜ್, ತಾಲೂಕು ಅಧ್ಯಕ್ಷ ಸಣ್ಣಕ್ಕಿರುದ್ರಪ್ಪ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಒತ್ತಾಯ
ಹೊಸಪೇಟೆ: ತಾಲೂಕಿನ ಕೆರೆ ತುಂಬಿಸುವ ಯೋಜನೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಹಾಗೂ ಮುಚ್ಚಿರುವ ಸಕ್ಕರೆ ಕಾರ್ಖಾನೆಯನ್ನು ಶೀಘ್ರ ಪುನರಾರಂಭಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.
2022–23ನೇ ಸಾಲಿನಲ್ಲಿ ತಾಲೂಕಿನ ಪಿ.ಕೆ.ಹಳ್ಳಿ, ನಲ್ಲಾಪುರ, ಕಮಲಾಪುರ, ರಾಯರಕೆರೆ ಸೇರಿದಂತೆ ಹಲವು ಕೆರೆಗಳನ್ನು ತುಂಬಿಸುವ 247 ಕೋಟಿ ರೂ. ವೆಚ್ಚದ ಏತ ನೀರಾವರಿ ಯೋಜನೆಯಲ್ಲಿ ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸಿದ್ದಾರೆ. ಕಾಮಗಾರಿ ಪೂರ್ಣಗೊಳ್ಳದೆ ರೈತರಿಗೆ ನೀರು ಸಿಗುತ್ತಿಲ್ಲವಾದ್ದರಿಂದ ಈ ಯೋಜನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಬೇಕು ಎಂದು ಒತ್ತಾಯಿಸಯಿತು.
ಜತೆಗೆ, 2015–16 ರಿಂದ ಮುಚ್ಚಿರುವ ಸ್ಥಳೀಯ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸುವುದಾಗಿ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯನ್ನು ಸರ್ಕಾರ ಈಡೇರಿಸಬೇಕು. ಜಿಲ್ಲೆಯಲ್ಲಿ ತಲೆದೋರಿರುವ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ, ಪ್ರತಿ ಎಕರೆU 50 ಸಾವಿರ ರೂ. ಪರಿಹಾರ ನೀಡಬೇಕು. ರೈತರ ಎಲ್ಲಾ ಕೃಷಿ ಸಾಲ ಮನ್ನಾ ಮಾಡಬೇಕು ಮತ್ತು ಬರ ಪರಿಸ್ಥಿತಿಯಲ್ಲಿ ಸಾಲ ವಸೂಲಾತಿಗೆ ನೋಟಿಸ್ ನೀಡಿ ರೈತರಿಗೆ ಕಿರುಕುಳ ನೀಡುತ್ತಿರುವ ಬ್ಯಾಂಕುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net