ಹರಪನಹಳ್ಳಿ: ಪಾಲಕರು ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ, ಪೋಲಿಯೋಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ದತ್ತಾತ್ರೆಯ ಪೀಸೆ ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಪೋಲಿಯೋದಿಂದ ಉಂಟಾಗುವ ಅಂಗವೈಕಲ್ಯ ತಡೆಗಟ್ಟಲು ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು ಎಂದು ಅವರು ತಿಳಿಸಿದರು. ಹಿರಿಯ ಶುಶ್ರೂಷಕಿ ರೇಣುಕಾ, ಪ್ರತಿಭಾ, ಕರಿಬಸವರಾಜ, ಪವಿತ್ರಾ, ಫರ್ಜಾನ, ಚಂದ್ರಪ್ಪ ಇತರರಿದ್ದರು.