ಕುವೆಂಪು ಸಂದೇಶ ನಮಗೆ ದಾರಿದೀಪ

ಹಗರಿಬೊಮ್ಮನಹಳ್ಳಿ ಪುರಸಭೆಯಲ್ಲಿ ಸಾಹಿತಿ ಕುವೆಂಪು ಜನ್ಮದಿನವನ್ನು ಸೋಮವಾರ ಆಚರಿಸಲಾಯಿತು.
ಹಗರಿಬೊಮ್ಮನಹಳ್ಳಿ ಪುರಸಭೆಯಲ್ಲಿ ಸಾಹಿತಿ ಕುವೆಂಪು ಜನ್ಮದಿನವನ್ನು ಸೋಮವಾರ ಆಚರಿಸಲಾಯಿತು.
Published on
ಹಗರಿಬೊಮ್ಮನಹಳ್ಳಿ: ರಾಷ್ಟ್ರಕವಿ ಕುವೆಂಪು ಜನ್ಮದಿನವನ್ನು ಪಟ್ಟಣದ ಪುರಸಭೆ ಕಚೇರಿಯಲ್ಲಿ ಸೋಮವಾರ ಆಚರಿಸಲಾಯಿತು.
ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅಧ್ಯಕ್ಷ ಮರಿ ರಾಮಪ್ಪ, ಕುವೆಂಪು ಅವರು ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರ. ಕನ್ನಡವನ್ನೇ ಉಸಿರಾಗಿಸಿಕೊಂಡವರು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿದ್ದಾರೆ ಎಂದರು.
ಜಿ.ಪಂ. ಮಾಜಿ ಸದಸ್ಯ ಅಕ್ಕಿ ತೋಟೇಶ್ ಮಾತನಾಡಿದರು. ಸದಸ್ಯ ರಾಜೇಶ್ ಬ್ಯಾಡಗಿ, ಪ್ರಮುಖರಾದ ಸತ್ಯನಾರಾಯಣ ವಕೀಲರು, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೋರಿ ಗೊಂಡಿಬಸಪ್ಪ, ಹನುಮಂತಪ್ಪ ಉಪ್ಪಾರ, ಮುಖ್ಯಾಧಿಕಾರಿ ಎಂ.ಕೆ. ಮುಗುಳಿ, ಪುರಸಭೆ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net