ಕುಷ್ಠ ಗುಣಪಡಿಸಬಹುದಾದ ರೋಗ

ಹೊಸಪೇಟೆ ಚಿತ್ತವಾಡಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ನಡೆದ ಕುಷ್ಠರೋಗ ಜಾಗೃತಿ ಕಾರ್ಯಗಾರವನ್ನು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಡಿ.ಭಾಸ್ಕರ್ ಉದ್ಘಾಟಿಸಿದರು. ಟಿಎಚ್‌ಒ ಡಾ.ವಿನೋದ್, ಆರೋಗ್ಯಕೇಂದ್ರದ ವೈದ್ಯಾಧಿಕಾರಿ ಡಾ.ಬಸವರಾಜ್, ಡಾ.ಯಶವಂತ್, ಜಿಲ್ಲಾ ಕುಷ್ಠರೋಗ ಸಲಹೆಗಾರ ಡಾ.ಕೊಟ್ರೇಶ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಜಾಗೃತಿ ಕಾರ್ಯಗಾರದಲ್ಲಿ ವೈದ್ಯಾಧಿಕಾರಿ ಡಾ.ಡಿ.ಭಾಸ್ಕರ್ ಸಲಹೆ
ಹೊಸಪೇಟೆ: ಕುಷ್ಠ ರೋಗಿಗಳನ್ನು ತಾರತಮ್ಯ ತೋರದೆ, ನೋವಿನಿಂದ ಬಳಲುವ ಅವರನ್ನು ಮುಖ್ಯವಾಹಿನಿಗೆ ತಂದು ಸಾಮಾನ್ಯರೊಂದಿಗೆ ಬದುಕಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಡಿ.ಭಾಸ್ಕರ್ ತಿಳಿಸಿದರು.
ನಗರದ ಚಿತ್ತವಾಡಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ನಡೆದ ಕುಷ್ಠರೋಗ ಜಾಗೃತಿ ಕಾರ್ಯಗಾರದಲ್ಲಿ ಮಾತನಾಡಿದರು.
ಗಾಂಧೀಜಿಯವರು ಹುತಾತ್ಮರಾದ ದಿನದಂದು ಅವರ ಸ್ಮರಣೆಯಲ್ಲಿ ರಾಷ್ಟ್ರದಾದ್ಯಂತ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಕುಷ್ಠರೋಗವು ದೇವರ ಶಾಪ ಅಥವಾ ಪಾಪದ ಫಲಗಳಿಂದ ಬರುವುದಿಲ್ಲ. ಗಾಂಧೀಜಿಯವರ ಕುಷ್ಠ ಮುಕ್ತ ದೇಶದ ಕನಸನ್ನು ನಾವೆಲ್ಲಾ ನನಸಾಗಿಸೋಣ. ಕುಷ್ಠರೋಗವನ್ನು ಸುಲಭವಾಗಿ ಪತ್ತೆ ಹಚ್ಚಿ ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ ಎಂದರು.
ಜಿಲ್ಲೆಯಾದ್ಯAತ ಜ.30 ರಿಂದ ಫೆ.13ರ ವರೆಗೆ ಹದಿನೈದು ದಿನಗಳ ಕಾಲ ಕುಷ್ಠರೋಗ ಕುರಿತು ಜಾಗೃತಿ ಮೂಡಿಸಲಾಗುವುದು. ರೋಗದ ಗುಣಲಕ್ಷಣಗಳನ್ನು ಗಮನಿಸಿ ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆಯುವುದರಿಂದ ಉಂಟಾಗುವ ಅಂಗವೈಕಲ್ಯತೆ ತಡೆಗಟ್ಟಬಹುದಾಗಿದೆ. ಜಿಲ್ಲೆಯಲ್ಲಿ ಒಟ್ಟು 91 ಹೊಸ ಪ್ರಕರಣಗಳು ಕಂಡು ಬಂದಿದ್ದು ಈ ಪೈಕಿ 82 ಪ್ರಕರಣಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 99 ಕುಷ್ಠರೋಗ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net