ಬರಗಾಲದಿಂದ ರೈತರಿಗೆ ನಷ್ಟ ಆಗದಿರಲಿ

ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅಧಿಕಾರಿಗಳ ಸಭೆ ನಡೆಸಿದರು. ಹರಪನಹಳ್ಳಿ ಶಾಸಕರಾದ ಲತಾ ಮಲ್ಲಿಕಾರ್ಜುನ್, ಕೃಷ್ಣ ನಾಯ್ಕ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿ.ಪಂ. ಸಿಇಓ ನೊಂಗ್ಜಾಯ್ ಮಹಮದ್ ಅಲಿ ಅಕ್ರಂ ಷಾ, ಎಸ್.ಪಿ.ಜಾಹ್ನವಿ ಇತರರಿದ್ದರು.
ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅಧಿಕಾರಿಗಳ ಸಭೆ ನಡೆಸಿದರು. ಹರಪನಹಳ್ಳಿ ಶಾಸಕರಾದ ಲತಾ ಮಲ್ಲಿಕಾರ್ಜುನ್, ಕೃಷ್ಣ ನಾಯ್ಕ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿ.ಪಂ. ಸಿಇಓ ನೊಂಗ್ಜಾಯ್ ಮಹಮದ್ ಅಲಿ ಅಕ್ರಂ ಷಾ, ಎಸ್.ಪಿ.ಜಾಹ್ನವಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅಧಿಕಾರಿಗಳಿಗೆ ಸೂಚನೆ
ಹೊಸಪೇಟೆ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಿಜಯನಗರ ಜಿಲ್ಲೆಯಲ್ಲಿ ಶೇಕಡಾ 60 ರಷ್ಟು ಮಳೆ ಕೊರತೆಯಾಗಿದ್ದು, ಜಿಲ್ಲೆಯಾದ್ಯಂತ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಸರ್ಕಾರದ ಮಟ್ಟದಲ್ಲಿ ಅಗತ್ಯ ನೆರವು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಭರವಸೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಬರ ಅದ್ಯಯನ ಮಾಡಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದರು.
ಕಳೆದ ಜೂ.01 ರಿಂದ ಆ.06 ರವರೆಗೆ 188.7 ಮಿ.ಮೀ. ವಾಡಿಕೆ ಮಳೆಯಾಗಬೇಕಿದ್ದ ಜಾಗದಲ್ಲಿ ಕೇವಲ 76.0 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2,97,633 ಹೆಕ್ಟೇರ್ ಬಿತ್ತನೆ ಗುರಿಯಲ್ಲಿ ಕೇವಲ ಶೇ. 65 ರಷ್ಟು ಮಾತ್ರ ಬಿತ್ತನೆಯಾಗಿದೆ. ತೇವಾಂಶ ಕೊರತೆಯಿಂದಾಗಿ ಜೋಳ, ಮೆಕ್ಕೆಜೋಳ ಹಾಗೂ ಸಿರಿಧಾನ್ಯ ಬೆಳೆಗಳು ಶೇ. 40 ರಿಂದ 90 ರಷ್ಟು ಒಣಗಿಹೋಗಿವೆ. 1,289 ಹೆಕ್ಟೇರ್ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿವೆ.
ಹೊಸಪೇಟೆ (ಶೇ. 77) ಮತ್ತು ಹಗರಿಬೊಮ್ಮನಹಳ್ಳಿ (ಶೇ. 63) ತಾಲೂಕುಗಳಲ್ಲಿ ಅತ್ಯಧಿಕ ಮಳೆ ಕೊರತೆ ದಾಖಲಾಗಿದೆ. ರೈತರಿಗೆ ಬ್ಯಾಂಕುಗಳಿಂದ ನೋಟಿಸ್ ನೀಡದಂತೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗೆ ಸೂಚಿಸಿದರು. ಪ್ರಸ್ತುತ ತುಂಗಭದ್ರಾ ಜಲಾಶಯದಲ್ಲಿ 64.81 ಟಿಎಂಸಿ ನೀರಿದ್ದು, ಇದನ್ನು ಪ್ರಥಮ ಆದ್ಯತೆಯಾಗಿ ಕುಡಿಯುವ ನೀರಿಗೆ ಕಾಯ್ದಿರಿಸಲಾಗಿದೆ. ಸದ್ಯಗ್ರಾಮೀಣ ಭಾಗದ 32 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ ಎಂದರು.
ಜಿಲ್ಲೆಯಲ್ಲಿ 50 ವಾರಗಳಿಗೆ ಆಗುವಷ್ಟು (7.61 ಲಕ್ಷ ಟನ್) ಮೇವು ಲಭ್ಯವಿದೆ. ಬರ ನಿರ್ವಹಣೆಗೆ ₹916.09 ಲಕ್ಷ ಅನುದಾನ ಮೀಸಲಿಡಲಾಗಿದೆ. ರೈತರು ನಷ್ಟ ಪರಿಹಾರಕ್ಕಾಗಿ ಫಸಲ್ ಭೀಮಾ ಯೋಜನೆಯಡಿ ವಿಮೆ ನೋಂದಾಯಿಸಿಕೊಳ್ಳಲು ಹಾಗೂ ಪರ್ಯಾಯ ಬೆಳೆಗಳನ್ನು ಅಳವಡಿಸಿಕೊಳ್ಳಲು ಸಚಿವರು ಸಲಹೆ ನೀಡಿದ್ದಾರೆ. ಕ್ಷೇತ್ರ ವೀಕ್ಷಣೆಯ ವಾಸ್ತವ ವರದಿಯನ್ನು ಶೀಘ್ರವೇ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net