

ಪ್ರಮುಖ ಮುಖ್ಯಾಂಶಗಳು
ಹೊಸಪೇಟೆ: ಜಿಲ್ಲೆಯಲ್ಲಿ ಡಿ.21 ರಿಂದ 24 ರವರಗೆ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮೊದಲ ದಿನವೇ ಗರಿಷ್ಟ ಗುರಿ ತಲುಪವ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ದತೆ ಮತ್ತು ಡಿಟಿಎಫ್ಐ ದಡಾರ ಮತ್ತು ರುಬೇಲ್ಲಾ ನಿರ್ಮೂಲನ ಕಾರ್ಯಕ್ರಮದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು.
ಜನರಿಗೆ ಪೋಲಿಯೊ ಲಸಿಕೆಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಡಿ.21 ರಿಂದ 24 ರವರೆಗೆ ಅಂಗನವಾಡಿ ಕೇಂದ್ರಗಳನ್ನು ತೆರೆದು. ಶಿಕ್ಷಣ ಇಲಾಖೆಯಿಂದ ಶಾಲಾ ಪ್ರಾರ್ಥನೆಯ ಸಮಯದಲ್ಲಿ ಮಾಹಿತಿ ನೀಡಬೇಕು. ನಗರ ಸ್ಥಳೀಯ ಸಂಸ್ಥೆ ಇತರೆ ಇಲಾಖೆಗಳಿಂದ ಕಸ ವಿಲೇವಾರಿ ವಾಹನಗಳಲ್ಲಿ ಜಾಗೃತಿ ಮೂಡಿಸಿ. ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ವಾಹನಗಳ ಪೂರೈಕೆ ಮಾಡಬೇಕು. ಕಾರ್ಯಕ್ರಮ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದರು.
ಆಸ್ಪತ್ರೆಗೆ ಬರುವ ಗರ್ಭಿಣೆಯರಿಗೆ ತಪಾಸಣೆಯ ಜತೆಗೆ ಯಕೊ ಮತ್ತು ಇಸಿಜಿಯನ್ನು ಕಡ್ಡಾಯವಾಗಿ ಮಾಡಬೇಕು. ಎಲ್ಲಾ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವಲ್ಲಿ ವೈದ್ಯರು ಸಮಯಕ್ಕೆ ಸರಿಯಾಗಿ ಆರೋಗ್ಯ ಕೇಂದ್ರದಲ್ಲಿದ್ದು ರೋಗಿಗಳ ತಪಾಸಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಡಿಎಚ್‌ಒ ಡಾ.ಶಂಕರ್ ನಾಯ್ಕ್ ಎಲ್.ಆರ್ ಮಾತನಾಡಿ, ಜಿಲ್ಲೆಯಲ್ಲಿ 1.21 ಲಕ್ಷ 5 ವರ್ಷದೊಳಗಿನ ಮಕ್ಕಳಿದ್ದಾರೆ. ಜಿಲ್ಲೆಯಲ್ಲಿ 923 ತಂಡಗಳು, 04 ಮೊಬೈಲ್ ತಂಡಗಳು, 1040 ಬೂತ್ಗಳು ಹಾಗೂ ಬಸ್ ನಿಲ್ದಾಣ, ರೈಲ್ವೇ ಸ್ಟೆಷನ್ ಮತ್ತು ಪ್ರಮುಖ ವೃತ್ತಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 50 ಟ್ರಾನ್ಸಿಟ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. 2170 ಲಸಿಕಾ ಕಾರ್ಯಕರ್ತರನ್ನು ನಿಯೋಜನೆ ಮಾಡಲಾಗಿದೆ. ಮೊದಲ ದಿನ ಭೂತ ಮಟ್ಟದಲ್ಲಿ ನಂತರ ಮೂರು ದಿನಗಳ ಕಾಲ ಮನೆ ಮನೆಗೆ ಭೇಡಿ ನೀಡಿ ಲಸಿಕೆ ಹಾಕಲಾಗುತ್ತದೆ ಎಂದರು.
ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ, ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ.ಭಾಸ್ಕರ್, ಡಾ.ರಾಧಿಕಾ ಇತರರಿದ್ದರು.