ವೈಜ್ಞಾನಿಕವಾಗಿಘನತ್ಯಾಜ್ಯ ವಿಲೇವಾರಿ ಆಗಲಿ

ಹೊಸಪೇಟೆಜಿಲ್ಲಾಧಿಕಾರಿಕಚೇರಿಯಲ್ಲಿ ಬುಧವಾರಜಿಲ್ಲಾಧಿಕಾರಿಕವಿತಾಎಸ್.ಮನ್ನಿಕೇರಿಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆ ನಡೆಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮನೋಹರ್, ನಗರಸಭೆ ಪೌರಾಯುಕ್ತ ಶಿವಕುಮಾರ್, ಉಪವಿಭಾಗಾಧಿಕಾರಿಪಿ.ವಿವೇಕಾನಂದ, ತಹಸೀಲ್ದಾರ್ ಶೃತಿ.ಎಂ.ಮಳ್ಳಪ್ಪಗೌಡ್ರ್ ಇತರರಿದ್ದರು.
ಹೊಸಪೇಟೆಜಿಲ್ಲಾಧಿಕಾರಿಕಚೇರಿಯಲ್ಲಿ ಬುಧವಾರಜಿಲ್ಲಾಧಿಕಾರಿಕವಿತಾಎಸ್.ಮನ್ನಿಕೇರಿಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆ ನಡೆಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮನೋಹರ್, ನಗರಸಭೆ ಪೌರಾಯುಕ್ತ ಶಿವಕುಮಾರ್, ಉಪವಿಭಾಗಾಧಿಕಾರಿಪಿ.ವಿವೇಕಾನಂದ, ತಹಸೀಲ್ದಾರ್ ಶೃತಿ.ಎಂ.ಮಳ್ಳಪ್ಪಗೌಡ್ರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಜಿಲ್ಲಾಧಿಕಾರಿಕವಿತಾಎಸ್ ಮನ್ನಿಕೇರಿ ಸೂಚನೆ
ಹೊಸಪೇಟೆ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉತ್ಪತ್ತಿಯಾಗುತ್ತಿರುವಘನತ್ಯಾಜ್ಯವನ್ನು ಸುಪ್ರೀಂಕೋರ್ಟ್ಆದೇಶದಅನ್ವಯಅತ್ಯAತ ವೈಜ್ಞಾನಿಕವಾಗಿ ಮತ್ತು ಸಮರ್ಪಕವಾಗಿ ವಿಲೇವಾರಿ ಮಾಡಬೇಕುಎಂದುಜಿಲ್ಲಾಧಿಕಾರಿಕವಿತಾಎಸ್.ಮನ್ನಿಕೇರಿ ಸೂಚನೆ ನೀಡಿದರು.
ನಗರದಜಿಲ್ಲಾಧಿಕಾರಿಕಚೇರಿಯಲ್ಲಿ ಬುಧವಾರಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯಲ್ಲಿ ಮಾತನಾಡಿದರು.
ಕಸದ ವಿಲೇವಾರಿಯನ್ನಷ್ಟೇ ಗುರಿಯಾಗಿಟ್ಟುಕೊಳ್ಳದೆ, ಪರಿಸರ ಸಮತೋಲನ ಕಾಪಾಡಿಕೊಳ್ಳುವುದು ಯೋಜನೆಯಉದ್ದೇಶವಾಗಿದೆ. ಕಸ ಎಲ್ಲೆಂದರಲ್ಲಿಎಸೆಯದೇ, ಸುಡುವುದಾಗಲಿ ಅಥವಾ ಭೂಮಿಯಲ್ಲಿ ಹೂಳುವುದಾಗಲಿ ಮಾಡದೆ, ವೈಜ್ಞಾನಿಕ ವಿಲೇವಾರಿ ಮಾಡುವ ಮೂಲಕ ತ್ಯಾಜ್ಯ ಮುಕ್ತ ಪರಿಸರ ನಿರ್ಮಿಸಬೇಕು. ಒಮ್ಮೆ ಬಳಸಿ ಬಿಸಾಡುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆಗೆ ನೀಡಬೇಕು. ಹಸಿ ಕಸದಿಂದಕಾAಪೋಸ್ಟ್ ನಂತಹಗೊಬ್ಬರ ತಯಾರಿಸಿ ಮಣ್ಣಿನ ಫಲವತ್ತತೆ ಹೆಚ್ಚಿಸುವುದು ಮತ್ತು ಪ್ಲಾಸ್ಟಿಕ್‌ನಂತಹ ವಸ್ತುಗಳನ್ನು ಮರುಬಳಕೆಗೆ ಒಳಪಡಿಸುವುದು ಸೂಕ್ತ ಎಂದರು.
ಬೃಹತ್‌ತ್ಯಾಜ್ಯಉತ್ಪಾದಕರಿಗೆ ಹೊಸ ನಿಯಮಅನ್ವಯ ದಿನಕ್ಕೆ 100 ಕೆ.ಜಿಗಿಂತ ಹೆಚ್ಚು ತ್ಯಾಜ್ಯಉತ್ಪಾದಿಸುವ ಸಂಸ್ಥೆಗಳು ಅಥವಾ 20 ಸಾವಿರಚದರ ಮೀಟರ್‌ಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವಅಪಾರ್ಟ್ಮೆAಟ್ ಮತ್ತು ವಾಣಿಜ್ಯ ಮಳಿಗೆಗಳು ತಮ್ಮಆವರಣದಲ್ಲೇತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಹೊಂದುವುದುಕಡ್ಡಾಯವಾಗಿದೆ. ತಪ್ಪಿದಲ್ಲಿಅಂತಹ ಸಂಸ್ಥೆಗಳು ಬೃಹತ್‌ತ್ಯಾಜ್ಯಉತ್ಪಾದಕಜವಾಬ್ದಾರಿ ಪ್ರಮಾಣಪತ್ರ ಪಡೆಯುವುದುಕಡ್ಡಾಯವಾಗಿದೆ. ಈ ನಿಯಮ ಉಲ್ಲಂಘಿಸಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಸ್ಥಳದಲ್ಲೇ ದಂಡ ವಿಧಿಸುವ ವ್ಯವಸ್ಥೆಜಾರಿಗೆತರಲುಚಿಂತನೆ ನಡೆಸಲಾಗಿದೆಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net