ರೈತರು ಸ್ವತಃ ಬಂದು ಮಾರಾಟ ಮಾಡಲಿ

ಕೂಡ್ಲಿಗಿ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಎಪಿಎಂಸಿ ಅಧ್ಯಕ್ಷ ಎಂ.ಬೋಸಯ್ಯ ಚಾಲನೆ ನೀಡಿದರು.
ಕೂಡ್ಲಿಗಿ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಎಪಿಎಂಸಿ ಅಧ್ಯಕ್ಷ ಎಂ.ಬೋಸಯ್ಯ ಚಾಲನೆ ನೀಡಿದರು.
Published on
ಕೂಡ್ಲಿಗಿ: ಪ್ರತಿ ಕ್ವಿಂಟಾಲ್‌ಗೆ 4,886 ರೂ.ನಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಎಂ.ಬೋಸಯ್ಯ ಹೇಳಿದರು.
ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಿ ಮಂಗಳವಾರ ಮಾತನಾಡಿದರು. ಖರೀದಿ ಪ್ರಕ್ರಿಯೆಯಲ್ಲಿ ಪಾರದರ್ಶತೆ ಹಾಗೂ ಗುಣಮಟ್ಟಕ್ಕೆ ಆದ್ಯತೆ ನೀಡಲಾಗುತ್ತಿದೆ. ರೈತರು ಸ್ವತಃ ಖರೀದಿ ಕೇಂದ್ರಕ್ಕೆ ಬಂದು ಬಯೋಮೆಟ್ರಿಕ್ ಬಳಕೆ ಮೂಲಕ ರಾಗಿ ಮಾರಾಟ ಮಾಡಬೇಕು ಎಂದರು.
ಎಪಿಎಂಸಿ ಸದಸ್ಯ ಟಿ.ಜಿ.ಮಲ್ಲಿಕಾರ್ಜುನ ಗೌಡ ಮಾತನಾಡಿ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈಗಾಗಲೇ ತಾಲೂಕಿನಲ್ಲಿ ನೋಂದಣಿ ಮಾಡಿಕೊಂಡಿರುವ ರೈತರಿಂದ ರಾಗಿ ಖರೀದಿ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಖರೀದಿ ಕೇಂದ್ರದಲ್ಲಿ ಯಾವುದೇ ಅವ್ಯವಹಾರ ನಡೆದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ತಾಲೂಕಿನಲ್ಲಿ ಖರೀದಿಯಾದ ರಾಗಿಯನ್ನು ಸ್ಥಳೀಯ ಪಡಿತರ ವಿತರಣಾ ವ್ಯವಸ್ಥೆ ಮೂಲಕವೇ ವಿತರಿಸಲಾಗುತ್ತದೆ. ಸಾರ್ವಜನಿಕ ಉಪಯೋಗಕ್ಕೆ ಬರುವ ರಾಗಿ ಶುದ್ಧವಾಗಿರುವಂತೆ ಅಧಿಕಾರಿಗಳು ಗಮನ ಹರಿಸಬೇಕು ಎಂದರು.
ಎಪಿಎಂಸಿ ಉಪಾಧ್ಯಕ್ಷ ಕೆ.ಮಹಾದೇವಪ್ಪ, ಕಾರ್ಯದರ್ಶಿ ಎಸ್.ಸಿ.ಬಸವರಾಜ, ಸದಸ್ಯ ರಂಗಾ ಶ್ರೀನಿವಾಸ್, ಸಾಸಲವಾಡ ಚಂದ್ರಪ್ಪ, ಚನ್ನಬಸಪ್ಪ, ತಿಪ್ಪೇಸ್ವಾಮಿ, ಗೌತಮ್, ರಮ್ಜಾನ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net