ಸರ್ಕಾರ ಬೇಡಿಕೆಗಳನ್ನು ಈಡೇರಿಸಲಿ

ಹೊಸಪೇಟೆಯಲ್ಲಿ ಜಿಲ್ಲಾಧಿಕಾರಿ ಕವಿತ ಎಸ್.ಮನ್ನಿಕೇರಿ ಅವರಿಗೆ ಆರೋಗ್ಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗುವುದು ಎಂದು ಮನವಿ ಸಲ್ಲಿಸಿದರು. ರಾಜ್ಯ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಸರ್ಕಾರಿ ವೈದ್ಯ ಸಂಘದ ಜಿಲ್ಲಾ ಅಧ್ಯಕ್ಷ ಡಾ.ಬಿ.ಜಂಬಯ್ಯ ನಾಯಕ, ಕಾರ್ಯದರ್ಶಿ ಡಾ.ಡಿ.ಬಾಸ್ಕರ್, ಆರೋಗ್ಯ ಇಲಾಖೆ ವಿವಿಧ ಸಂಘಗಳ ಜಿಲ್ಲಾಧ್ಯಕ್ಷರಾದ ಎಂ.ಧರ್ಮನ ಗೌಡ, ಮಂಜುಳಾ, ಬಸವರಾಜ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಆರೋಗ್ಯ ಇಲಾಖೆಯ ವಿವಿಧ ಸಂಘಟನೆಗಳಿAದ ಜಿಲ್ಲಾಧಿಕಾರಿಗೆ ಮನವಿ
ಹೊಸಪೇಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದಿAದ ಜಿಲ್ಲಾಧಿಕಾರಿ ಕವಿತ ಎಸ್.ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಿದರು.
ವೈದ್ಯರು, ಅಧಿಕಾರಿ, ನೌಕರರ ಬೇಡಿಕೆ ಮತ್ತು ಸಮಸ್ಯೆಗಳ ಈಡೇರಿಕೆ ಕುರಿತಂತೆ ಹಲವಾರು ಬಾರಿ ಇಲಾಖೆಯ ಸಚಿವರು ಮತ್ತು ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಮತ್ತು ಚರ್ಚೆಗಳನ್ನು ನಡೆಸಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಮಾ.11ರಿಂದ ಮಾ.15ರ ವರೆಗೆ ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಮತ್ತು ಡಿಸ್ಪೆನ್ಸರಿಗಳಲ್ಲಿನ ಎಲ್ಲ ವೃಂದದ ವೈದ್ಯರು, ಅಧಿಕಾರಿ-ನೌಕರರು ಕಪ್ಪು ಪಟ್ಟಿ ಧರಿಸಿ ಹೊರರೋಗಿಗಳ ಚಿಕಿತ್ಸೆಯನ್ನು ಸ್ಥಗಿತಗೊಳಿಸಿ, ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಾರೆ. ಸರ್ಕಾರ ಸ್ಪಂದಿಸದಿದ್ದರೆ ಮಾ.16ರಿಂದ ಬೇಡಿಕೆ ಈಡೇರುವವರಿಗೂ ರಾಜ್ಯದ ಆರೋಗ್ಯ ಇಲಾಖೆಯ ಎಲ್ಲ ವೈದ್ಯರು, ಅಧಿಕಾರಿಗಳು, ನೌಕರರು ಕರ್ತವ್ಯಕ್ಕೆ ಅನಿರ್ಧಿಷ್ಟಾವಧಿವರೆಗೆ ಗೈರುಹಾಜರಾಗಿ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಔಷಧಿಗಳ ಸರಬರಾಜು, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಮುಂಬಡ್ತಿ, ಉನ್ನತ ವ್ಯಾಸಂಗ, ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ, ಖಾಲಿ ಹುದ್ದೆಗಳ ಭರ್ತಿ, ಕೇಂದ್ರ ಪುರಸ್ಕೃತ ಯೋಜನೆ ಅಡಿ ಕಾರ್ಯನಿರತ ಸುಮಾರು 6 ಸಾವಿರ ನೌಕರರಿಗೆ ಹಲವಾರು ವರ್ಷಗಳಿಂದ 3-4 ತಿಂಗಳಿಗೊಮ್ಮೆ ವೇತನ ಭತ್ಯೆಗಳನ್ನು ನೀಡುತ್ತಿದ್ದು, ಪ್ರತಿ ತಿಂಗಳ ಮೊದಲ ವಾರದಲ್ಲಿ ವೇತನ ಭತ್ಯೆಗಳನ್ನು ನೀಡುವುದು ಸೇರಿ 11 ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net