ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಂಘಟನಾ ಸಭೆಯಲ್ಲಿ ಜಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮಂಡಲ ಪದಾದಿಕಾರಿಗಳನ್ನು ಸನ್ಮಾನಿಸಲಾಯಿತು.
Published on:
Copied
Follow Us
ಹರಪನಹಳ್ಳಿ: ಮುಂಬರುವ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸನ್ನದ್ಧರಾಗೋಣ. ಇದಕ್ಕಾಗಿ ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಆಗಬೇಕಿದೆ ಎಂದು ಜಗಳೂರು ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ ತಿಳಿಸಿದರು.
ಉಚ್ಚಂಗಿದುರ್ಗ ಗ್ರಾಮದ ಹಾಲಮ್ಮನ ತೋಪಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಘಟನಾ ಸಭೆ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬೇವಿನಹಳ್ಳಿ ಕೆಂಚನಗೌಡ ಮಾತನಾಡಿ, ಪಕ್ಷದಲ್ಲಿನ ಆಂತರಿಕ ಗೊಂದಲಗಳನ್ನು ಸರಿಪಡಿಸಿಕೊಂಡು ಸಂಘಟನೆ ಮಾಡಬೇಕು ಮತ್ತು ಪಕ್ಷದ ಶಿಸ್ತನ್ನು ಎಲ್ಲರೂ ಪಾಲಿಸಬೇಕು ಎಂದರು.
ಜಗಳೂರು ಕ್ಷೇತ್ರದ ಮಂಡಲ ಉಪಾಧ್ಯಕ್ಷ ಪ್ರಶಾಂತ ಪಾಟೀಲ್ ಮಾತನಾಡಿ, ಜಗಳೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ತಾಲೂಕಿನ ಏಳು ಗ್ರಾಮ ಪಂಚಾಯಿತಿಗಳು ಅಭಿವೃದ್ಧಿಯಲ್ಲಿ ಕುಂಠಿತಗೊಂಡಿವೆ, ರಾಮಚಂದ್ರಪ್ಪ ಅವರ ಅವಧಿಯಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಸುಣ್ಣ-ಬಣ್ಣ ಬಳಿಸಲು ಸಾಧ್ಯವಾಗಿಲ್ಲ. ಕಳೆದ ಬಾರಿ ಬಿಜೆಪಿ ಆಂತರಿಕ ಬಿಕ್ಕಟ್ಟಿನಿಂದ ಕಾರ್ಯಕರ್ತರೇ ನಮ್ಮ ಅಭ್ಯರ್ಥಿಯನ್ನು ಸೋಲಿಸಿದ್ದಾರೆ ಎಂದರು.