ಕಾರ್ಮಿಕರಿಗೆ ಸಕಾಲಕ್ಕೆ ಯೋಜನೆಗಳು ತಲುಪಲಿ

ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮ್ಯಾನ್ಯುಯಲ್ ಸ್ಕಾö್ಯವೆಂಜರ್ ಅನುಷ್ಠಾನ ಸಮಿತಿ ಸಭೆ ನಡೆಸಿದರು. ಎಸ್ಪಿ ಎಸ್.ಜಾಹ್ನವಿ ಇದ್ದರು.
ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮ್ಯಾನ್ಯುಯಲ್ ಸ್ಕಾö್ಯವೆಂಜರ್ ಅನುಷ್ಠಾನ ಸಮಿತಿ ಸಭೆ ನಡೆಸಿದರು. ಎಸ್ಪಿ ಎಸ್.ಜಾಹ್ನವಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಅನುಷ್ಠಾನ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
ಹೊಸಪೇಟೆ: ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳನ್ನು ಸಕಾಲಕ್ಕೆ ಒದಗಿಸುವ ಮೂಲಕ ಸಾಮಾಜಿಕ ಮತ್ತು ಆರ್ಥಿಕವಾಗಿ ಮುನ್ನಲೆಗೆ ತರಲು ಅಧಿಕಾರಿಗಳು ಶ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮ್ಯಾನುಯಲ್ ಸ್ಕಾö್ಯವೆಂಜರ್ ಕಾರ್ಮಿಕರಿಗೆ ಕಾಲಕಾಲಕ್ಕೆ ನಿರಂತರವಾಗಿ ಆರೋಗ್ಯ ತಪಾಸಣೆ ನಡೆಸಬೇಕು. ಕಾರ್ಮಿಕರ ಆರೋಗ್ಯ ಹಿತದೃಷ್ಠಿಯಿಂದ ಗ್ಲೌಸ್, ಬೂಟು ಇನ್ನಿತರೆ ಅತ್ಯಾಧುನಿಕ ಸುರಕ್ಷಿತ ಪರಿಕರಗಳನ್ನು ಒದಗಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಇತ್ತೀಚೆಗೆ ಅನಧಿಕೃತವಾಗಿ ಕಾರ್ಮಿಕರ ಗುರುತಿನ ಚೀಟಿ ಬಳಸಿಕೊಂಡು ಅನಾಮಿಕ ವ್ಯಕ್ತಿಗಳು ಕಾರ್ಯ ನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದ್ದು, ಕಾನೂನಾತ್ಮಕ ಅಪರಾಧವಾಗಿದೆ. ಕಾರ್ಮಿಕರಿಗೆ ವೈಯಕ್ತಿಕ ಸಮಸ್ಯೆಗಳಿದ್ದಲ್ಲಿ ಸ್ವಯಂ ನಿವೃತ್ತಿ ಪಡೆಯಬಹುದು. ಅದಲ್ಲದೇ ತಮ್ಮ ಗುರುತಿನ ಚೀಟಿ ನೀಡಿ ಬೇರೊಬ್ಬರಿಗೆ ಕರ್ತವ್ಯಕ್ಕೆ ನಿಯೋಜಿಸುವಂತಿಲ್ಲ. ಇದು ಮರುಕಳಿಸಿದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮ್ಯಾನ್ಯುಯಲ್ ಸ್ಕಾö್ಯವೆಂಜರ್ ಅನುಷ್ಠಾನ ಸಮಿತಿ ಸದಸ್ಯರುಗಳು ಮಾತನಾಡಿ, ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಕಾಲಕ್ಕೆ ವೇತನ ಹಾಗೂ ಇಎಸ್‌ಐ ಮತ್ತು ಭವಿಷ್ಯನಿಧಿ ತುಂಬಿಲ್ಲ. ಮರಿಯಮ್ಮನಹಳ್ಳಿ ಹೋಬಳಿಯಲ್ಲಿ 8 ಜನ ಹೊರಗುತ್ತಿಗೆ ಆಧಾರದಡಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ ಕಳೆದ 9 ತಿಂಗಳಿAದ ವೇತನ ಪಾವತಿಸಿಲ್ಲ ಎಂದು ಸಮಿತಿ ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಈ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಲಾಗುವುದು. ದೃಡಪಟ್ಟಲ್ಲಿ ಸಂಸ್ಥೆಗೆ ಶೋಕಾಸ್ ನೋಟೀಸ್ ನೀಡಲಾಗುವುದು. ಅದಕ್ಕೂ ನಿರ್ಲಕ್ಷö್ಯವಹಿಸಿದಲ್ಲಿ ಅಂತಹ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ಎಸ್ಪಿ ಎಸ್.ಜಾಹ್ನವಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net