ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಲಿ

ಹೊಸಪೇಟೆ ತಾಲೂಕು ಪಂಚಾಯಿತಿಯ ವಿದ್ಯಾರಣ್ಯ ಸಭಾಂಗಣದಲ್ಲಿ ಇತ್ತಿಚೆಗೆ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಕಾರ್ಯಾಗಾರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಗಂಗಪ್ಪ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಮಹದೇವ್, ಶಬೀರ್ ನದಾಫ್ ಅವರು ಕಾರ್ಯಾಗಾರ ನಿರ್ವಹಿಸಿದರು. ಜಿಲ್ಲಾ ಮಿಷನ್ ಶಕ್ತಿ ಸಂಯೋಜಕಿ ವಿದ್ಯಾ, ಪಿಎಂಎAವಿವೈ ಸಂಯೋಜಕ ರಾಘವೇಂದ್ರ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಪಿಎಂಎAವಿವೈ ಕಾರ್ಯಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಗಂಗಪ್ಪ ಸೂಚನೆ
ಹೊಸಪೇಟೆ: ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯ ರಕ್ಷಣೆ ಹಾಗೂ ಪೌಷ್ಟಿಕಾಂಶ ವೃದ್ಧಿಸುವಲ್ಲಿ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಪಿಎಂಎAವಿವೈ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಗಂಗಪ್ಪ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿ ಆಶ್ರಯದಲ್ಲಿ ನಗರದ ತಾಲೂಕು ಪಂಚಾಯಿತಿಯ ವಿದ್ಯಾರಣ್ಯ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮೊದಲ ಬಾರಿಗೆ ತಾಯಿಯಾಗುವ ಮಹಿಳೆಯರಿಗೆ ಆರ್ಥಿಕ ನೆರವು ನೀಡುವುದರ ಜತೆಗೆ, ಗರ್ಭಾವಸ್ಥೆಯಲ್ಲಿ ಸೂಕ್ತ ವಿಶ್ರಾಂತಿ ಮತ್ತು ಪೌಷ್ಟಿಕ ಆಹಾರ ಸಿಗುವಂತೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪುವಂತೆ ಮಾಡಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಹಾಯಕಿಯರು ತಳಮಟ್ಟದಲ್ಲಿ ಶ್ರಮಿಸಬೇಕು ಎಂದರು.
ಕಾರ್ಯಾಗಾರದಲ್ಲಿ ಯೋಜನೆಯಡಿ ಸಿಗುವ ಸೌಲಭ್ಯಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತ್ತೀಚಿನ ತಾಂತ್ರಿಕ ಬದಲಾವಣೆಗಳ ಕುರಿತು ಇಲಾಖೆಯ ಸಂಪನ್ಮೂಲ ವ್ಯಕ್ತಿಗಳು ಸವಿಸ್ತಾರವಾಗಿ ಮಾಹಿತಿ ನೀಡಿದರು. ಡಿಜಿಟಲ್ ಪಾವತಿ ವ್ಯವಸ್ಥೆಯ ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗುವುದರಿಂದ ಪಾರದರ್ಶಕತೆ ಕಾಯ್ದುಕೊಳ್ಳಲು ಸಾಧ್ಯವಾಗಿದೆ ಎಂದು ವಿವರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net