ಯುವಜನತೆ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಲಿ

ಹರಪನಹಳ್ಳಿ ನಗರಸಭೆಯಲ್ಲಿ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಿಸಲಾಯಿತು.
ಹರಪನಹಳ್ಳಿ ನಗರಸಭೆಯಲ್ಲಿ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಿಸಲಾಯಿತು.
Published on
ಹರಪನಹಳ್ಳಿ: ಅಧಿಕಾರ ಮತ್ತು ಐಶ್ವರ್ಯದಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಸಂಪಾದಿಸಬಹುದು ಎನ್ನುವ ಸಂದೇಶ ಸಾರಿದ ಹೆಗ್ಗಳಿಕೆ ಡಾ.ಬಾಬು ಜಗಜೀವನರಾಮ್ ಅವರಿಗೆ ಸಲ್ಲುತ್ತದೆ ಎಂದು ನಗರಸಭೆ ಪೌರಾಯುಕ್ತೆ ರೇಣುಕಾ ಎಸ್. ದೇಸಾಯಿ ತಿಳಿಸಿದರು.
ನಗರಸಭೆಯಲ್ಲಿ ಭಾನುವಾರ ಆಯೋಜಿಸಿದ್ದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನ ರೀತಿಯಿಂದ ಜೀವನ ಸಾಗಿಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಬಾಬೂಜಿ ಹೊಂದಿದ್ದರು. ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದರು, ದೇಶದ ಜನರು ಆಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಆರಂಭಿಸಿ ಅವರ ಬದುಕಿಗೆ ನೆರವಾದರು. ಇಂತಹ ಮಹಾನ್ ನಾಯಕರ ಕೊಡುಗೆ, ತತ್ವಾದರ್ಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net