ಜನರಿಗೆ ನೀಡಿದ ಭರವಸೆಗೆ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ. ಇದು ಶೇ.60 ಕಮಿಷನ್ ಸರ್ಕಾರವಾಗಿ ಮಾರ್ಪಟ್ಟಿದೆ. ಕರ್ನಾಟಕವನ್ನು ಎಟಿಎಂ ಮಾಡಿಕೊಂಡು ಕಾಂಗ್ರೆಸ್ ನ ಕೇಂದ್ರ ಹೈಕಮಾಂಡಿಗೆ ಹಣ ಕಳಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೊದಲ ದಿನದಿಂದ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳನ್ನೇ ಪ್ರಮುಖವಾಗಿ ತೆಗೆದುಕೊಳ್ಳಬೇಕು ಬೆಳಗಾವಿ, ಯಾದಗಿರಿ, ಕಲ್ಬುರ್ಗಿ, ಬೀದರ್, ಬಾಗಲಕೋಟೆ, ಬಿಜಾಪುರ, ರಾಯಚೂರಿನಲ್ಲಿ ಪ್ರವಾಹ ಪರಿಸ್ಥಿತಿ ಇತ್ತು. ಸರ್ಕಾರ ಈ ವಿಷಯದಲ್ಲಿ ಮೂರ್ನಾಲ್ಕು ತಿಂಗಳಾದ ಬಳಿಕ ನಿದ್ದೆಯಿಂದ ಎದ್ದೇಳುತ್ತಿದೆ.