ಇತ್ತೀಚೆಗೆ ಜಿಲ್ಲೆಯ ಹಲವು ತಾಲೂಕುಗಳ ಪ್ರವಾಸ ಕೈಗೊಂಡು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲೆಯ 740 ಗ್ರಾಮಗಳ ಪೈಕಿ 153 ಗ್ರಾಮಗಳಲ್ಲಿ ನೀರಿನ ಅಭಾವ ಉಂಟಾಗಬಹುದೆAದು ಗುರುತಿಸಲಾಗಿದೆ. ಅದರಂತೆ ಈಗಾಗಲೇ ಜಿಲ್ಲೆಯ ಹರಪನಹಳ್ಳಿ ತಾಲೂಕಿನ 24 ಗ್ರಾಮ, ಹಗರಿಬೊಮ್ಮನಹಳ್ಳಿಯ 5 ಮತ್ತು ಹಡಗಲಿ ತಾಲೂಕಿನ 3 ಗ್ರಾಮಗಳು ಸೇರಿದಂತೆ ಒಟ್ಟು 32 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸಿದೆ. ಈ ನೀರಿನ ಸಮಸ್ಯೆ ಉಂಟಾದ ಗ್ರಾಮಗಳಿಗೆ 41 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಸರಬರಾಜು ಮಾಡುತ್ತಿದೆ. ಅಲ್ಲದೆ, ಅಗತ್ಯವಿದ್ದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ 4 ನೀರಿನ ಟ್ಯಾಂಕರ್‌ಗಳನ್ನು ಬಳಸಿಕೊಳ್ಳಲು ಸೂಚಿಸಿದರು.